ಮೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟ?
ಉಪ ಚುನಾವಣೆಗೆ ಮೂರು ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿದ್ದು, ಶುಕ್ರವಾರ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ,...

ಬೆಂಗಳೂರು: ಉಪ ಚುನಾವಣೆಗೆ ಮೂರು ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿದ್ದು, ಶುಕ್ರವಾರ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ,
ಅಭ್ಯರ್ಥಿಗಳ ಆಯ್ಕೆಯಲ್ಲಿ ಕಬ್ಬಿಣದ ಕಡಲೆಯಾಗಿದ್ದ ಹೆಬ್ಬಾಳ ಕ್ಷೇತ್ರಕ್ಕೆ ನಾರಾಯಣ ಸ್ವಾಮಿ ಅವರನ್ನು ಅಂತಿಮ ಗೊಳಿಸಲಾಗಿದೆ. ಇದೇ ರೀತಿ ಬೀದರ್ ಉತ್ತರ ಕ್ಷೇತ್ರಕ್ಕೆ ಗುರುಪಾದಪ್ಪ ನಾಗಮಾರಪಲ್ಲಿ ಪುತ್ರ ಸೂರ್ಯಕಾಂತ್ ನಾಗಮಾರಪಲ್ಲಿ ದೇವದುರ್ಗಕ್ಕೆ ಶಿವನಗೌಡ ನಾಯಕ್ ಹೆಸರು ಅಂತಿಮವಾಗಿದೆ ಎಂದು ಮೂಲಗಳು ತಿಳಿಸಿವೆ.
ಬದಲಾದ ಹೆಬ್ಬಾಳ ತಂತ್ರ: ಶಾಸಕ ಜಗದೀಶ್ ಅಕಾಲಿಕ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆಯುತ್ತಿರುವ ಉಪ ಚುನಾವಣೆಗೆ ಜಗದೀಶ್ ಕುಮಾರ್ ಪತ್ನಿ ಅಥವಾ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಸೊಸೆಯನ್ನು ಕಣಕ್ಕಿಳಿಸಲಾಗುವುದು ಎಂಬ ಮಾತುಗಳು ಕೇಳಿ ಬಂದ್ದಿದ್ದವು. ಆದರೆ ಅಂತಿಮವಾಗಿ ನಾರಾಯಣ ಸ್ವಾಮಿ ಅವರನ್ನು ಕಣಕ್ಕಿಳಿಸಲು ಹೆಚ್ಚಿ ಮುಖಂಡರು ಒಲವು ತೋರಿದ್ದು ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಮತ್ತೆ ನಾಯಕತ್ವ ಸಮಸ್ಯೆ: ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ ನಡೆಸಲಾಗವುದು ಎಂದಿರುವ ಬಿಜೆಪಿ, ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೊಂದಾಣಿಕೆ ಕೊರತೆ ಬಹಿರಂಗ ಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


