ರಾಜಕೀಯ

ಸಿಎಂರನ್ನು ಅರ್ಧ ತಾಸು ನಿಲ್ಲಿಸಿದರು!

ನಗರದ ಹೊರವಲಯದ ಚದಲಪುರ ಕ್ರಾಸ್ ಬಳಿ ನೀರಾವರಿ ಹೋರಾಟ ವೇದಿಕೆ ನಡೆಸುವತ್ತಿರುವ ಅನಿರ್ದಿಷ್ಟಾವಧಿ ಧರಣಿ...

ಸಿಎಂರನ್ನು ಅರ್ಧ ತಾಸು ನಿಲ್ಲಿಸಿದರು!
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :

ಚಿಕ್ಕಬಳ್ಳಾಪುರ: ನಗರದ ಹೊರವಲಯದ ಚದಲಪುರ ಕ್ರಾಸ್ ಬಳಿ ನೀರಾವರಿ ಹೋರಾಟ ವೇದಿಕೆ ನಡೆಸುವತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೋರಾಟಗಾರರು ವೇದಿಕೆ ಹತ್ತಲೂ ಬಿಡದೆ, ಕೂರಲೂ ಜಾಗ ನೀಡದೆ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ನಿಲ್ಲಿಸಿಕೊಂಡ ಘಟನೆ ಶನಿವಾರ ನಡೆದಿದೆ.

ಕಾಂಗ್ರೆಸ್ ಪ್ರಚಾರ ಸಭೆಗೆ ಚಾಲನೆ ನೀಡಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾರಿಯಲ್ಲೇ ಹೋರಾಟದ ಸ್ಥಳಕ್ಕೆ ಆಗಮಿಸಿದರು. ಸಿಎಂ ಅವರಿಗೆ ಘೋಷಣೆಗಳ ಮೂಲಕ ಸ್ವಾಗತ ಕೋರಿದ ಹೋರಾಟಗಾರರು, ಎತ್ತಿನಹೊಳೆ ಯೋಜನೆಯಿಂದ ಈ ಭಾಗಕ್ಕೆ ಅಗತ್ಯ ನೀರು ಲಭ್ಯವಾಗುವುದಿಲ್ಲ, ಹಾಗಾಗಿ ಪರಮಶಿವಯ್ಯ ವರದಿ ಆಧರಿತ ಸಮಗ್ರ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು, ಈ ಭಾಗದ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಿಂತುಕೊಂಡೇ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ ಮಾತನಾಡಿ, ಎರಡು ಪೂರ್ಣಗೊಳಿಸುವುದಾಗಿ ತಾವು ಎಲ್ಲೂ ಹೇಳಿಲ್ಲ. ಎತ್ತಿನಹೊಳೆ ಮತ್ತು ಬೆಂಗಳೂರಿನ ತ್ಯಾಜ್ಯ ನೀರು ಸಂಸ್ಕರಿಸಿ ನೀಡುವ ಯೋಜನೆ ಬಿಟ್ಟು ಬೇರೆ ಯಾವ ಯೋಜನೆಯೂ ಸರ್ಕಾರದ ಮುಂದಿಲ್ಲ ಎಂದರು.

ಇದರಿಂದ ಆಕ್ರೋಶಗೊಂಡ ಹೋರಾಟಗಾರರು ಸಮಸ್ಯೆ ಕುರಿತು ಸ್ಪಷ್ಟ ಭರವಸೆ ನೀಡಬೇಕೆಂದು ಪಟ್ಟು ಹಿಡಿದಾಗ ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಯಾವುದೇ ಘೋಷಣೆ ಮಾಡಲು ಸಾಧ್ಯವಿಲ್ಲ. ಚುನಾವಣೆ ಮುಗಿದ ಕೂಡಲೇ ಸಭೆ ಕರೆದು ಈ ಕುರಿತು ಚರ್ಚಿಸೋಣ ಎನ್ನುವ ಮೂಲಕ ಮಾತುಕತೆಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.