ಕನಿಷ್ಠ 25 ಜಿಲ್ಲೆಗಳ ಕೈವಶ ಮಾಡಿಕೊಳ್ಳಿ: ಸಿದ್ದರಾಮಯ್ಯ
ರಾಜ್ಯಾದ್ಯಂತ ಮುಂದಿನ ತಿಂಗಳು ನಡೆಯಲಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಯ..

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ತಿಂಗಳು ನಡೆಯಲಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಯ ಸಂಪೂರ್ಣ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೊರಿಸಿದ್ದಾರೆ.
ಒಟ್ಟಾರೆ ಕ್ಷೇತ್ರಗಳ ಪೈಕಿ ಕನಿಷ್ಠ 25 ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರ ಹಾಗೂ ಪಕ್ಷಕ್ಕೆ ಈ ಚುನಾವಣೆ ಅತ್ಯಂತ ಪ್ರತಿಷ್ಠೆಯಾಗಿದ್ದು, ಕಳೆದ 30 ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಹತ್ತಾರು ಜನಪರ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ಜಾರಿಗೆ ತಂದಿದೆ. ಸಮಾಜದ ಎಲ್ಲ ವರ್ಗಗಳಿಗೂ ಅದರಲ್ಲಿಯೂ ಹಿಂದುಳಿದವರಿಗೆ, ಅಲ್ಪ ಸಂಖ್ಯಾತರಿಗೆ ಮತ್ತು ದಲಿತ ವರ್ಗಗಳಿಗೆ ಹೆಚ್ಚಿನ ಆದ್ಯತೆ ನೀಡಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ. ಈ ವರ್ಗದ ಮತಗಳ ಕಡೆ ಹೆಚ್ಚಿನ ಗಮನ ಹರಿಸಿ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಸಂಪುಟ ಸಭೆ ಬಳಿಕ ತಾಲ್ಲೂಕು ಪಂಚಾಯಿ ಹಾಗೂ ಜಿಲ್ಲಾ ಪಂಚಾಯಿತು ಚುನಾವಣೆ ಕುರಿತು ಅನೌಪಚಾರಿಕವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಭ್ಯರ್ಥಿಗಳ ಆಯ್ಕೆಯನ್ನು ಸ್ಥಳೀಯವಾಗಿಯೇ ಬಿಟ್ಟುಕೊಟ್ಟಿರುವುದರಿಂದ ಯಾವುದೇ ರೀತಿಯ ಗೊಂದಲ ವಿವಾದಗಳಿಗೆ ಆಸ್ಪದ ಕೊಡದಂತೆ ಉಸ್ತುವಾರಿ ಸಚಿವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲೆಯಲ್ಲಿ ಶಾಸಕರು, ಸಂಸದರು ಒಂದಾಗಿ ಟಿಕೆಟ್ ಹಂಚಿಕೆ ಮಾಡಹೇಕು, ಆದಷ್ಟು ಒಮ್ಮತದ ಅಭ್ಯರ್ಥಗಳ ಆಯ್ಕೆಗೆ ಆದ್ಯತೆ ನೀಡಿ ಬಂಡಾಯ ಅಭ್ಯರ್ಥಿಗಳನ್ನು ಕಡಿಮೆ ಮಾಡಿ ಗೆಲುವಿನ ದಾರಿ ಸುಲಭವಾಗುತ್ತದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಹಾಗೂ ಜೆಡಿಎಸ್ ಸಹ ಗೆಲ್ಲಲು ಎಲ್ಲ ಬಗೆಯ ರಣತಂತ್ರಗಳನ್ನು ರೂಪಿಸಲಿವೆ, ಆ ಪಕ್ಷಗಳು ಏನೇ ತಂತ್ರ ರೂಪಿಸಿದರೂ ಅದಕ್ಕೆ ಪ್ರತಿತಂತ್ರ ರೂಪಿಸಿ ಗೆಲುವು ಸಾಧಿಸಬೇಕು, ಸ್ಥಳೀಯವಾಗಿ ಗೆಲ್ಲುವ ಅಭ್ಯರ್ಥಿಗಳನ್ನು ಗುರುತಿಸಿ ಆದ್ಯತೆ ಕೊಡಬೇಕು. ಪಕ್ಷದಿಂದ ಎಲ್ಲ ಬಗೆಯ ನೆರವು, ಸಹಕಾರ ನೀಡಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


