ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ನಲ್ಲಿ ಕವಡೆ ಕಿಮ್ಮತ್ತಿಲ್ಲ: ಯಡಿಯೂರಪ್ಪ

ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್‌ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಯಡಿಯೂರಪ್ಪ ಲೇವಡಿ ಮಾಡಿದ್ದಾರೆ....

ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ನಲ್ಲಿ ಕವಡೆ ಕಿಮ್ಮತ್ತಿಲ್ಲ: ಯಡಿಯೂರಪ್ಪ
ಬಿ.ಎಸ್ ಯಡ್ಯೂರಪ್ಪ
Published On :

ರಾಯಚೂರು: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್‌ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ಮಂತ್ರಾಲಯದ ಶ್ರೀರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಗುರು ರಾಯರ ದರ್ಶನ ಪಡೆದು ಮಾತ ನಾಡಿದರು. ಹೆಬ್ಬಾಳ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ಹಿನ್ನಡೆಯಾಗಿರುವ ಕುರಿತು ಪ್ರತಿಕ್ರಿಯಿಸಿದರು.

ಸಿಎಂ ಸಿದ್ದರಾಮಯ್ಯ ಹೆಬ್ಬಾಳ ಕ್ಷೇತ್ರದ ಟಿಕೆಟ್‌ವಿಚಾರದಲ್ಲಿ ಬೈರತಿ ಸುರೇಶ್‌ ಪರ ಬ್ಯಾಟಿಂಗ್‌ ಮಾಡಿದ್ದರು. ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಜಾಫರ್‌ ಷರೀಫ್‌ ತಮ್ಮ ಪುತ್ರನಿಗೆ ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಸಿದ್ದರಾಮಯ್ಯ ಮಾತಿಗೆ ಮನ್ನಣೆ ನೀಡಿಲ್ಲವೆಂದರು.

ಸಿದ್ದರಾಮಯ್ಯ ಅವರ ಮಾತಿಗೆ ಬೆಲೆ ಕೊಡುವುದಿದ್ದರೆ ಭೈರತಿ ಸುರೇಶ್ ಅವರಿಗೆ ಟಿಕೆಟ್ ಸಿಗಬೇಕಿತ್ತು. ಆದರೆ, ಜಾಫರ್ ಷರೀಫ್‌ ಅವರು ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ' ಎಂದು ಯಡಿಯೂರಪ್ಪ ತಿಳಿಸಿದರು.

'ಕಾಂಗ್ರೆಸ್ ಪಕ್ಷದಲ್ಲಿ ಉಪ ಚುನಾವಣೆಯ ಬಗ್ಗೆ ಹಲವು ಗೊಂದಲಗಳಿವೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿಯೇ ಕೊನೆ ಕ್ಷಣದವರೆಗೆ ಗೊಂದಲವಿತ್ತು. ಇದು ಬಿಜೆಪಿಗೆ ಸಹಕಾರಿಯಾಗಲಿದ್ದು, ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ' ಎಂದು ಯಡಿಯೂರಪ್ಪ ಹೇಳಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.