ಪ್ರತಿಪಕ್ಷಗಳು ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿವೆ: ಸಿಎಂ ಸಿದ್ದರಾಮಯ್ಯ
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ...

Published On :
ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆರೋಪಿಸಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ರಾಜಿನಾಮೆ ನೀಡಬೇಕು ಮತ್ತು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಸದನದಲ್ಲಿ ಧರಣಿ ನಡೆಸುತ್ತಿರುವ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಪ್ರತಿಪಕ್ಷಗಳು ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿವೆ ಎಂದರು.
'ಇದು ಒತ್ತಡ ತಂತ್ರವಲ್ಲ, ಕೇವಲ ರಾಜಕೀಯ ತಂತ್ರವಷ್ಟೆ. ಘಟನೆ ನಡೆದ ತಕ್ಷಣವೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ತನಿಖೆಯಲ್ಲಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ. ನಿಷ್ಪಕ್ಷಪಾತವಾಗಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತದೆ' ಎಂದರು.
ಪ್ರಕರಣ ಸಂಬಂಧ ಕೆ.ಜೆ.ಜಾರ್ಜ್ ಅವರು ರಾಜಿನಾಮೆ ನೀಡಬೇಕು ಎಂಬ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಅಲ್ಪಸಂಖ್ಯಾತ ನಾಯಕರನ್ನೇ ಟಾರ್ಗೆಟ್ ಮಾಡುತ್ತಿದೆ ಎಂದರು.
ಇನ್ನು ಘಟನೆ ನಡೆದು ಮೂರು ದಿನಗಳ ನಂತರ ಈಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಗಣಪತಿ ಕುಟುಂಬ ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದು ಸಿಎಂ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


