ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಶೆಟ್ಟರ್ ಕಿಡಿ
ದಿವಂಗತ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆ ಪ್ರಕರಣವನ್ನು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ರಾಜಕೀಯ ಮಾಡುತ್ತಿದ್ದು, ದುರ್ಬಳಕೆ ಮಾಡಿಕೊಳ್ಳಲು...

ಹುಬ್ಬಳ್ಳಿ: ದಿವಂಗತ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆ ಪ್ರಕರಣವನ್ನು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ರಾಜಕೀಯ ಮಾಡುತ್ತಿದ್ದು, ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.
ಅಧಿಕಾರಿಗಳ ಆತ್ಮಹತ್ಯೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ತಪ್ಪಿತಸ್ಥರಿಗೆ ಸರ್ಕಾರ ನಿಜಕ್ಕೂ ಶಿಕ್ಷೆ ನೀಡುವ ಉದ್ದೇಶವನ್ನು ಹೊಂದಿದ್ದೇ ಆದರೆ, ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಿ ಎಂದು ಹೇಳಿದ್ದಾರೆ.
ಅಲ್ಲದೆ, ಗಣಪತಿಯವರ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಸಚಿವ ಕೆ.ಜೆ. ಜಾರ್ಜ್ ಅವರ ಹೆಸರು ಕೇಳಿ ಬಂದಿದ್ದು, ಕೂಡಲೇ ಜಾರ್ಜ್ ಅವರು ರಾಜಿನಾಮೆ ನೀಡಬೇಕು ಮತ್ತು ಇಬ್ಬರು ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ ಪ್ರಕರಣ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಇತ್ತೀಚೆಗಷ್ಟೇ ಕಲ್ಲಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿರುವ ಜಗದೀಶ್ ಶೆಟ್ಟರ್ ಅವರು, ಮಾಜಿ ಮುಖ್ಯಮಂತ್ರಿಗಳು ಪ್ರಕರಣಕ್ಕೆ ರಾಜಕೀಯ ಬಣ್ಣ ನೀಡುವ ಮುಖಾಂತರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


