ರಾಜಕೀಯ

ಶಿಸ್ತಿನ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಅಸಹಿಷ್ಣುತೆ ಇಲ್ಲ: ದಿನೇಶ್ ಗುಂಡೂರಾವ್

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಜಯಭೇರಿ ಸಾಧಿಸಲಿದ್ದು, ಶಿಸ್ತಿನ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ರೀತಿಯ ಅಸಹಿಷ್ಣುತೆ ಇಲ್ಲ ಎಂದು...

ಶಿಸ್ತಿನ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಅಸಹಿಷ್ಣುತೆ ಇಲ್ಲ: ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Published On :

ಬೆಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಜಯಭೇರಿ ಸಾಧಿಸಲಿದ್ದು, ಶಿಸ್ತಿನ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ರೀತಿಯ ಅಸಹಿಷ್ಣುತೆ ಇಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿರುವ ಅವರು, ಇತಿಹಾಸ ಮರುಕಳಿಸಲಿದೆ. ಕರ್ನಾಟಕದ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಪಕ್ಷದಲ್ಲಿ ಸಾಕಷ್ಟು ಪ್ರಾಮಾಣಿಕ ಕಾರ್ಯಕರ್ತರಿದ್ದು ಅವರ ಪರಿಶ್ರಮಕ್ಕೆ ಸರಿಯಾದ ರೀತಿಯ ಪ್ರತಿಫಲ ಸಿಗುತ್ತಿಲ್ಲ.

ಇಂತಹ ಪ್ರಾಮಾಣಿಕರಿಗೆ ಸರಿಹೊಂದುವ ಸ್ಥಾನವನ್ನು ನೀಡಬೇಕು. ಪಕ್ಷವನ್ನು ಹೊಡೆಯಲು ಸಾಕಷ್ಟು ದೊಡ್ಡ ದೊಡ್ಡ ಪಿತೂರಿಗಳೇ ನಡೆಯುತ್ತಿದೆ. ನಾವು ಒಗ್ಗಟ್ಟಾಗಿ ಮುಂದೆ ಸಾಗಬೇಕಿದೆ. ನಮ್ಮಲ್ಲಿ ಒಗ್ಗಟ್ಟು ಒಡೆದರೆ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕುತ್ತದೆ ಎಂದು ಹೇಳುವ ಮೂಲಕ ಪಕ್ಷದಲ್ಲಿ ಬಂಡಾಯವೆದ್ದಿದ್ದ ನಾಯಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.

ನಾವೀಗ ಚುನಾವಣಾ ಆಲೋಚನೆಯಲ್ಲಿದ್ದೇವೆ: ಸಿಎಂ ಸಿದ್ದರಾಮಯ್ಯ

2018 ವಿಧಾನಸಭಾ ಚುನಾವಣೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲೆಕೆಡಿಸಿಕೊಂಡಿದ್ದು, ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಸಚಿವ ಸ್ಥಾನ ಕಳೆದುಕೊಳ್ಳಬೇಕಾದವರಿಗೆ ಮಂತ್ರಿ ಮಂಡಲ ಸಭೆಯಲ್ಲಿ ಮಾಹಿತಿ ತಿಳಿಸಿದ್ದೇನೆ. ನಂತರ ಹೈ ಕಮಾಂಡ್ ಅನುಮತಿ ಪಡೆದು ಮಂತ್ರಿ ಮಂಡಲ ವಿಸ್ತರಣೆ ಮಾಡಿದ್ದೇನೆ. ಅಸಮಾಧಾನವೇನಾದರೂ ಇದ್ದರೆ ಚರ್ಚೆ ನಡೆಸಬೇಕು.

ಅದನ್ನು ಬಿಟ್ಟು ಬಹಿರಂಗವಾಗಿ ಹೇಳಿಕೆ ನೀಡುವುದು ಸಲಿಯಲ್ಲ. ಮುಂದಿನ 22 ತಿಂಗಳು ಚುನಾವಣಾ ಅವಧಿ. ಸರ್ಕಾರ ಎಷ್ಟೇ ಜನಪರವಾಗಿ ಕೆಲಸ ಮಾಡಿದರೂ ಪಕ್ಷದಲ್ಲಿ ಒಗ್ಗಟ್ಟು ಇಲ್ಲದಿದ್ದರೆ ಚುನಾವಣೆ ಎದುರಿಸುವುದು ಕಷ್ಟ. ಸಂಪುಟ ಪುನಾರಚನೆ ನಂತರ ದಿನೇಶ್ ಗುಂಡೂರಾವ್ ಅವರ ಸ್ಥಾನವನ್ನು ಬದಲಿಸಲಾಗಿತ್ತು. ಆದರೆ, ಅವರಿಗೆ ನೀಡಿದ ಸ್ಥಾನವನ್ನು ಒಪ್ಪಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಈ ವಿಚಾರದಲ್ಲಿ ಅವರನ್ನು ಅಭಿನಂದಿಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.