ರಾಜಕೀಯ

ಸಿಎಂ ಹೇಳಿದ್ರೆ ಒಂದೇ ನಿಮಿಷದಲ್ಲಿ ರಾಜಿನಾಮೆ: ಜಾರ್ಜ್

ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅವರಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬೆಂಗಳೂರು...

ಸಿಎಂ ಹೇಳಿದ್ರೆ ಒಂದೇ ನಿಮಿಷದಲ್ಲಿ ರಾಜಿನಾಮೆ: ಜಾರ್ಜ್
ಕೆ.ಜೆ.ಜಾರ್ಜ್
Published On :
ಬೆಂಗಳೂರು: ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅವರಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರೆ ಒಂದೇ ನಿಮಿಷದಲ್ಲೇ ರಾಜಿನಾಮೆ ನೀಡುವುದಾಗಿ ಮಂಗಳವಾರ ಹೇಳಿದ್ದಾರೆ.
ಡಿವೈಎಸ್ಪಿ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರತಿಪಕ್ಷಗಳು ತಮ್ಮ ರಾಜಿನಾಮೆ ಆಗ್ರಹಿಸುತ್ತಿರುವ ಬಗ್ಗೆ ಖಾಸಹಿ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ ಜಾರ್ಜ್, ಸಿಎಂ ಬಯಸಿದರೆ ಒಂದೇ ನಿಮಿಷದಲ್ಲಿ ರಾಜಿನಾಮೆ ನೀಡುತ್ತೇನೆ. ಆದರೆ ವಿನಾಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಗೃಹ ಸಚಿವನಾಗಿದ್ದಾಗ ಇಲಾಖೆ ತನಿಖೆಯಲ್ಲೂ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದರು.
ನನ್ನಿಂದ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಧಕ್ಕೆಯಾಗುವುದಾದರೆ ನಾನು ರಾಜಿನಾಮೆ ನೀಡುತ್ತೇನೆ. ನಾನು ಎಂದಿಗೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತುಕೊಂಡವನಲ್ಲ. ಆದರೆ ಮಾಡದ ತಪ್ಪಿಗೆ ನಾನೇಕೆ ಶಿಕ್ಷೆ ಅನುಭವಿಸಬೇಕು ಎಂದು ಪ್ರಶ್ಮಿಸಿದ್ದಾರೆ.
ನಾನು ನನ್ನ ಆತ್ಮಸಾಕ್ಷಿಯಂತೆ ಮಾತಾನಾಡುತ್ತಿದ್ದೇನೆ. ನಾನು ಕಿರುಕುಳ ನೀಡಿದ್ದೇನೆಂದು ಇಲ್ಲ ಸಲ್ಲದ ಆರೋಪ ಮಾಡಲಾಗುತ್ತಿದೆ. ಒಂದು ವೇಳೆ ನಾನು ಕಿರುಕುಳ ನೀಡಿದ್ದರೆ ಬಗ್ಗೆ ಪ್ರತಿಪಕ್ಷಗಳ ಬಳಿ ಸಾಕ್ಷಿಯಿದೆಯೇ? ಎಂದು ಪ್ರಶ್ನಿಸಿದರು. ಅಲ್ಲದೆ ನಾನು ಗಣಪತಿಯವರನ್ನು ಒಮ್ಮೆ ಮಾತ್ರ ಭೇಟಿ ಮಾಡಿದ್ದೇನೆ. ಅದಾದ ನಂತರ ದೂರವಾಣಿಯಲ್ಲೂ ಮಾತನಾಡಿಲ್ಲ ಎಂದು ಜಾರ್ಜ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.