ರಾಜಕೀಯ

ನ್ಯಾಯಾಂಗ ತನಿಖೆ ಮೇಲೆ ನಂಬಿಕೆ ಇಲ್ಲ, ಗಣಪತಿ ಪ್ರಕರಣ ಸಿಬಿಐಗೆ ವಹಿಸಿ: ಬಿಎಸ್ ವೈ

ನ್ಯಾಯಾಂಗ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಹೀಗಾಗಿ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿಯ....

ನ್ಯಾಯಾಂಗ ತನಿಖೆ ಮೇಲೆ ನಂಬಿಕೆ ಇಲ್ಲ, ಗಣಪತಿ ಪ್ರಕರಣ ಸಿಬಿಐಗೆ ವಹಿಸಿ: ಬಿಎಸ್ ವೈ
ಬಿ.ಎಸ್.ಯಡಿಯೂರಪ್ಪ
Published On :
ಶಿವಮೊಗ್ಗ: ನ್ಯಾಯಾಂಗ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಹೀಗಾಗಿ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಆಗ್ರಹಿಸಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಜನರೇ ಪಾಠ ಕಲಿಸುತ್ತಾರೆ ಎಂದರು. 
ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಬೇಕು ಮತ್ತು ಸಚಿವ ಕೆ.ಜೆ.ಜಾರ್ಜ್ ಅವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮುಂದುವರೆಸಲಿದೆ ಎಂದರು. 
ಜಾರ್ಜ್ ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವಂತೆ ನಮ್ಮ ಶಾಸಕರಿಗೆ ಸೂಚಿಸಲಾಗಿದೆ ಎಂದರು. ಅಲ್ಲದೆ ನಾಳೆ ಕೊಡಗು ಬಂದ್ ಕರೆ ನೀಡಲಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಹೊಣೆ ಎಂದು ಬಿಎಸ್ ವೈ ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.