ರಾಜಕೀಯ

ಮೋದಿ ಸಭೆಗೆ ಗೈರು: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏರ್ಪಡಿಸಿದ್ದ ಸಭೆಗೆ ಗೈರು ಹಾಜರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ನಾಯಕರು ಕಿಡಿಕಾಡಿದ್ದಾರೆ...

ಮೋದಿ ಸಭೆಗೆ ಗೈರು: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏರ್ಪಡಿಸಿದ್ದ ಸಭೆಗೆ ಗೈರು ಹಾಜರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ನಾಯಕರು ಕಿಡಿಕಾಡಿದ್ದಾರೆ.

ರಾಷ್ಟ್ರೀಯ ಅಭಿವೃದ್ಧಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಸಭೆಯೊಂದನ್ನು ಏರ್ಪಡಿಸಿದ್ದರು. ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರು ಹಾಜರಾಗಬೇಕಿತ್ತು. ಆದರೆ, ಸಭೆಗೆ ಗೈರು ಹಾಜರಾಗಿದ್ದರು.

ಸಿದ್ದರಾಮಯ್ಯ ಅವರ ಗೈರು ಹಾಜರು ಕುರಿತಂತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು, ಮೋದಿಯವರ ನೇತೃತ್ವದಲ್ಲಿ ನಡೆದ ಎನ್ ಡಿಸಿ ಸಭೆಯಲ್ಲಿ ಎಲ್ಲಾ ರಾಜ್ಯಗಳು ಭಾಗವಹಿಸಿದ್ದವು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಸಭೆಯಲ್ಲಿ ಹಾಜರಿರಲಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ಪೊಲೀಸರ ಸರಣಿ ಆತ್ಮಹತ್ಯೆಯ ವಿಚಾರಗಳನ್ನು ಸಭೆಯಲ್ಲಿ ಎಲ್ಲಿ ಮೋದಿಯವರು ಪ್ರಸ್ತಾಪ ಮಾಡಿಬಿಡುತ್ತಾರೋ ಎಂಬ ಭಯ ಅವರನ್ನು ಕಾಡಿರಬೇಕು. ಹೀಗಾಗಿಯೇ ಅವರು ಗೈರು ಹಾಜರಾಗಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಮಾತನಾಡಿರುವ ಅವರು, ಡಿವೈಎಸ್ಪಿ ಗಣಪತಿಯವರು ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆಜೆ. ಜಾರ್ಜ್ ಅವರ ಹೆಸರು ಕೇಳಿಬಂದಿತ್ತು. ಕೂಡಲೇ ಜಾರ್ಜ್ ರಾಜೀನಾಮೆ ನೀಡಬೇಕು ಮತ್ತು ಎ.ಎಂ.ಪ್ರಸಾದ್ ಮತ್ತು ಪ್ರಣಬ್ ಮೊಹಾಂತಿ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕು. ಎಲ್ಲಿಯವರೆಗೂ ಆರೋಪಿತ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುವುದಿಲ್ಲವೋ ಅಲ್ಲಿಯವರೆಗೂ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ಹೇಳಿದ್ದಾರೆ.

ಗಣಪತಿಯವರು ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿರುವ ಅಧಿಕಾರಿಗಳನ್ನು ರಕ್ಷಣೆ ಮಾಡುವತ್ತ ಗಮನ ಹರಿಸುತ್ತಿರುವ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ವಿಚಾರಗಳನ್ನು ಕೇಂದ್ರದ ಗಮನಕ್ಕೆ ತರುವುದರಲ್ಲಿ ವಿಫಲವಾಗುತ್ತಿವೆ. ಪ್ರಧಾನಮಂತ್ರಿಯವರೊಂದಿಗೆ ರಾಜ್ಯದ ಅಭಿವೃದ್ಧಿ ಕೆಲಸಗಳ ಕುರಿತಂತೆ ಚರ್ಚೆ ನಡೆಸಲು ಸಿದ್ದರಾಮಯ್ಯ ಅವರು ಆಸಕ್ತಿ ತೋರುತ್ತಿಲ್ಲ.

ಸಭೆಗೆ ಗೈರು ಹಾಜರಾಗುವುದನ್ನೇ ಅಭ್ಯಾಸ ಮಾಡಿಕೊಂಡುಬಿಟ್ಟಿದ್ದಾರೆ. ಇತರೆ ರಾಜ್ಯದ ಅಧಿಕಾರಿಗಳು ಸಭೆಯನ್ನು ಬಳಕೆ ಮಾಡಿಕೊಂಡು ತಮ್ಮ ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಎನ್ಐಟಿಐ ಆಯೋಗದ ಸಭೆ ಬಗ್ಗೆಯೂ ಸಿದ್ದರಾಮಯ್ಯ ಅವರು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಗಣಪತಿ ಪ್ರಕರಣವನ್ನು ಸಂಸತ್ತಿನಲ್ಲಿ ಬಿಜೆಪಿ ಪ್ರಸ್ತಾಪ ಮಾಡಲಿದೆ. ಅಲ್ಲದೆ ಸಿಬಿಐ ತನಿಖೆಗೆ ಆಗ್ರಹಿಸಲಿದೆ. ಪ್ರಕರಣ ಕುರಿತು ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.