ಜಾರ್ಜ್ ರಾಜಿನಾಮೆಯನ್ನು ನಾನು ನೋವಿನಿಂದ ಅಂಗೀಕರಿಸಿದ್ದೇನೆ: ಸಿದ್ದರಾಮಯ್ಯ
ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಧ ಜಾರ್ಜ್ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದು, ಅದನ್ನು...

ಬೆಂಗಳೂರು: ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಧ ಜಾರ್ಜ್ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದು, ಅದನ್ನು ನೋವಿನಿಂದ ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಜಂಟಿ ಸುದ್ದಿಗೋಷ್ಟಿ ನಡೆಸಿದರು.
ಸಂಪುಟ ಸಹೋದ್ಯೋಗಿಯಾಗಿರುವ ಜಾರ್ಜ್ ರಾಜೀನಾಮೆ ನೀಡುವುದು ಬೇಡ ಎಂದರೂ ನೈತಿಕತೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ಅವರ ಭಾವನೆಗಳಿಗೆ ಗೌರವ ಕೊಡಬೇಕೆಂದು ರಾಜೀನಾಮೆ ಅಂಗೀಕರಿಸಿದ್ದೇನೆ. ಇನ್ನೂ ಯಡಿಯೂರಪ್ಪರಿಂದ ಹಿಡಿದು ಬಿಜೆಪಿ ನಾಯಕರಿಗೆ ರಾಜೀನಾಮೆ ಕೇಳುವ ಯಾವ ನೈತಿಕತೆಯಿಲ್ಲ. ಯಡಿಯೂರಪ್ಪ ಮೇಲೆ 30 ಕೇಸ್‌ಗಳಿವೆ. ಇನ್ನೊಬ್ಬರ ಬಗ್ಗೆ ಮಾತನಾಡುವಾಗ ತಮ್ಮ ಬಗ್ಗೆ ತಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ನಾವು ಕಾನೂನಿನ ಬಗ್ಗೆ ಗೌರವ ಹೊಂದಿದವರು, ಅದು ಯಾವುದೇ ಕೋರ್ಟ್ ಆದೇಶ ಇರಲಿ ಅದನ್ನು ಪಾಲಿಸುತ್ತೇವೆ ಎಂದು ಹೇಳಿದ್ದಾರೆ.
5 ವರ್ಷ ಅಧಿಕಾರದಲ್ಲಿರುವ ವೇಳೆ ಬಿಜೆಪಿಯವರು ಒಂದೂ ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. ಈಗ ಬಿಜೆಪಿಯ ನಾಯಕರು ಸಿಬಿಐಗೆ ಕೊಡಿ ಎನ್ನುವುದನ್ನು ಬಾಯಿ ಪಾಠ ಮಾಡಿಕೊಂಡಿದ್ದಾರೆ ಎಂದು ಕಿಡಿ ಕಾರಿದರು. ಬಿಜೆಪಿ ನಾಯಕರು ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಬಂಡಾರು ದತ್ತಾತ್ರೇಯ ಅವರ ರಾಜೀನಾಮೆ ಕೇಳಲಿ. ಸ್ಮೃತಿ ಇರಾನಿ ರಾಜೀನಾಮೆ ಕೇಳಲಿ. ಹೊಸದಾಗಿ ಸಂಪುಟ ಸೇರಿರುವ 19 ಸಚಿವರ ಪೈಕಿ 9 ಮಂದಿಯ ಮೇಲೆ ಕ್ರಿಮಿನಲ್ ಕೇಸ್ ದಾಖಲಾಗಿದೆ ಅವರ ರಾಜೀನಾಮೆ ಕೇಳಲಿ ಎಂದರು.
ಪರಮೇಶ್ವರ್ ಮಾತನಾಡಿ ಸತ್ಯ ಹೊರಗಡೆ ಬರಬೇಕು ಎನ್ನುವ ದೃಷ್ಟಿಯಿಂದ ಪಕ್ಷ ರಾಜೀನಾಮೆ ಒಪ್ಪಿಕೊಂಡಿದೆ. ಇಷ್ಟಾದರೂ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆದೊಯ್ಯುತ್ತಿದ್ದಾರೆ ಎಂದರು. ಬಿಜೆಪಿಯವರು ಮಾಡುತ್ತಿರುವ ಅಪಪ್ರಚಾರದ ವಿರುದ್ಧ ಕಾಂಗ್ರೆಸ್ ಸುಮ್ಮನೆ ಕೂರುವುದಿಲ್ಲ ಸಚಿವರು, ಶಾಸಕರು , ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತರಾಗಿ ರಾಜ್ಯದ ಜನತೆಗೆ ಸತ್ಯ ತಿಳಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


