ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ: ಜಾಫರ್ ಷರೀಫ್ ಸಲಹೆ
ಮುಂದಿನ ಚುನಾವಣೆಯಲ್ಲೂ ರಾಜ್ಯದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳು ಆತ್ಮಾವಲೋಕನ...

ಬೆಂಗಳೂರು: ಮುಂದಿನ ಚುನಾವಣೆಯಲ್ಲೂ ರಾಜ್ಯದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಶರೀಫ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ಅಧಃಪತನವಾದಾಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಉಂಟು. ಇರುವ ಅಧಿಕಾರವನ್ನು ಉಳಿಸಿಕೊಳ್ಳಬೇಕು. ಇಲ್ಲದ ಪ್ರಕರಣಗಳನ್ನು ಮೈಮೇಲೆ ಎಳೆದುಕೊಳ್ಳುವುದು ಒಳ್ಳೆಯದಲ್ಲ ಎಂದರು.
ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಜೆ.ಜಾರ್ಜ್ ಅವರು ಮೊದಲೇ ರಾಜೀನಾಮೆ ಕೊಡಬೇಕಾಗಿತ್ತು. ರಾಜೀನಾಮೆ ಕೊಡಲು ವಿಳಂಬವಾದದ್ದು ಏಕೆ ಎಂಬುದು ನನಗೆ ಗೊತ್ತಿಲ್ಲ. ಇದನ್ನು ಮುಖ್ಯಮಂತ್ರಿಗಳನ್ನೇ ಕೇಳಿ ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದರಲ್ಲದೆ, ಸರ್ಕಾರ ಪ್ರಕರಣದ ತನಿಖೆ ನಡೆಸಿದರಷ್ಟೇ ಸಾಲದು, ಸಹಾನುಬೂತಿ ತೋರಬೇಕಿದೆ ಎಂದು ಅಭಿಪ್ರಾಯ ಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


