ಜಮೀರ್ ಅಹಮದ್, ಚಲುವರಾಯಸ್ವಾಮಿ ಸಂಚಿನ ಬಗ್ಗೆ ನನಗೆ ತಿಳಿದಿದೆ: ಎಚ್.ಡಿ ದೇವೇಗೌಡ
ಜೆಡಿಎಸ್ ಪಕ್ಷವನ್ನು ಮುಗಿಸಲೆಂದೇ ಸ್ಟಿಂಗ್ ಆಪರೇಷನ್ ಮಾಡಲಾಗಿದೆ, ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಷಡ್ಯಂತ್ರ ಇದೆ ಎಂದು ಮಾಜಿ ಪ್ರಧಾನಿ ಹಾಗೂ

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಮುಗಿಸಲೆಂದೇ ಸ್ಟಿಂಗ್ ಆಪರೇಷನ್ ಮಾಡಲಾಗಿದೆ, ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಷಡ್ಯಂತ್ರ ಇದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.
ರಹಸ್ಯ ಕಾರ್ಯಾಚರಣೆನಡೆಸಿ ಶಾಸಕರ ಕುದುರೆ ವ್ಯಾಪಾರ ಬಯಲಿಗೆಳದ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು ನಮ್ಮ ಪಕ್ಷ ಮುಗಿಸಲು ಮಾಡಿರುವ ಸಂಚು ಇದು . ಇದರಲ್ಲಿ ಯಾವುದೇ ಸಂಶಯ ಇಲ್ಲ. ಕಳೆದ ಮೂರು ವರ್ಷಗಳಿಂದ ಜಮೀರ್ ಅಹ್ಮದ್ ಮತ್ತು ಚಲುವರಾಯ ಸ್ವಾಮಿ ಏನೇನು ಸಂಚು ನಡೆಸುತ್ತಿದ್ದಾರೆ ಎನ್ನುವುದು ನನಗೆ ಗೊತ್ತು,ಆದರೂ ನಾನು ಶಿಸ್ತು ಕ್ರಮ ಕೈಗೊಂಡಿಲ್ಲ ಎಂದರು.
ಬಸವಕಲ್ಯಾಣ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ,ಚಾಮುಂಡೇಶ್ವರಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸ್ಟಿಂಗ್‌ನಲ್ಲಿ ಸಿಲುಕಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಖೂಬಾ ಅಂತಹವನಲ್ಲ, ಹುಡುಗಾಟಿಕೆಗೆ ಹಾಗೇ ಹೇಳಿರಬೇಕು, ಜಿ.ಟಿ. ದೇವೇಗೌಡರಿಗೂ ಸ್ಟಿಂಗ್‌ಗೂ ಸಂಬಂಧವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


