ರಾಜಕೀಯ

ಸೋಲಿನ ಭೀತಿಯಿಂದ ಕುಮಾರಸ್ವಾಮಿಗೆ ಭ್ರಮನಿರಸ: ಸಿಎಂ ಸಿದ್ದರಾಮಯ್ಯ ಟೀಕೆ

ರಾಜ್ಯಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಭ್ರಮನಿರಸನಗೊಂಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ...

ಸೋಲಿನ ಭೀತಿಯಿಂದ ಕುಮಾರಸ್ವಾಮಿಗೆ ಭ್ರಮನಿರಸ: ಸಿಎಂ ಸಿದ್ದರಾಮಯ್ಯ ಟೀಕೆ
ಸಿದ್ದರಾಮಯ್ಯ ಮತ್ತು ಎಚ್ .ಡಿ ಕುಮಾರಸ್ವಾಮಿ
Published On :

ಮೈಸೂರು: ರಾಜ್ಯಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಭ್ರಮನಿರಸನಗೊಂಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಇಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮೈಸೂರಿನ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಪ್ರಬಲವಾಗಿರಬೇಕು. ಹೀಗಾಗಿ ವಿರೋಧ ಪಕ್ಷಗಳನ್ನು ದುರ್ಬಲ ಗೊಳಿಸುವ ಪ್ರಯತ್ನಕ್ಕೆ ನಾವೆಂದೂ ಕೈ ಹಾಕಿಲ್ಲ. ವಿಪಕ್ಷಗಳು ಕಾಂಗ್ರೆಸ್‌ ಮುಕ್ತ ರಾಜ್ಯದ ಮಾತಾಡುತ್ತಿವೆ. ನಾವೆಂದೂ ಬಿಜೆಪಿ, ಜೆಡಿಎಸ್‌ ಮುಕ್ತ ಮಾಡುತ್ತೇವೆ ಎನ್ನುವುದಿಲ್ಲ. ಯಾವ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭೆಗೆ ಕಾಂಗ್ರೆಸ್‌ನಿಂದ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಬಳಿಕವೂ ಹೆಚ್ಚುವರಿ ಮತಗಳು ಉಳಿಯುತ್ತವೆ. ಹೀಗಾಗಿ ಪಕ್ಷದಿಂದ 3ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಪಕ್ಷೇತರ ಶಾಸಕರ ಮತಗಳು ನಮಗೆ ಬರಲಿವೆ. ಇದರಿಂದ ಭ್ರಮನಿರಸನಗೊಂಡ ಎಚ್‌.ಡಿ. ಕುಮಾರಸ್ವಾಮಿ ಅವರು ಏನೇನೊ ಮಾತನಾಡುತ್ತಿದ್ದಾರೆ. ಜೆಡಿಎಸ್‌ ಪಕ್ಷದ ಆಂತರಿಕ ಕಿತ್ತಾಟಕ್ಕೆ ನಾವೇನೂ ಮಾಡಲಾಗುವುದಿಲ್ಲ ಎಂದು ಎಚ್‌ಡಿಕೆ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.