ರಾಜಕೀಯ

ರಾಜ್ಯಸಭೆ/ಪರಿಷತ್ ಚುನಾವಣೆ: ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಬುಧವಾರ ತನ್ನ ಎಲ್ಲಾ ಶಾಸಕರಿಗೆ...

ರಾಜ್ಯಸಭೆ/ಪರಿಷತ್ ಚುನಾವಣೆ: ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಬುಧವಾರ ತನ್ನ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಿದೆ.
ಇಂದು ಶಾಸಕರಿಗೆ ವಿಪ್ ಜಾರಿ ಮಾಡಿರುವ ಕಾಂಗ್ರೆಸ್ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರು, ಜೂನ್ 10 ಮತ್ತು 11ರಂದು ವಿಧಾನಸೌಧದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.
ಜೂನ್ 10ರಂದು ವಿಧಾನ ಪರಿಷತ್ ಗೆ ಹಾಗೂ ಜೂನ್ 11ರಂದು ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ರಾಜ್ಯಸಭೆಗೆ ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಜೆಡಿಎಸ್, ಬಿಜೆಪಿ ತಲಾ ಒಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.