ರಾಜಕೀಯ

ಸಂಪುಟ ಪುನಾರಚನೆ: ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ

ರಾಜ್ಯಸಭೆ ಹಾಗೂ ಪರಿಷತ್ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಸಂಬಂಧ ಪಕ್ಷದ ಹೈ ಕಮಾಂಡ್ ಜೊತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ...

ಸಂಪುಟ ಪುನಾರಚನೆ: ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ
ಸಿಎಂ ಸಿದ್ದರಾಮಯ್ಯ
Published On :

ಮೈಸೂರು: ರಾಜ್ಯಸಭೆ ಹಾಗೂ ಪರಿಷತ್ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಸಂಬಂಧ ಪಕ್ಷದ ಹೈ ಕಮಾಂಡ್ ಜೊತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ.

ವಿಧಾನಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಇಂದು ವಿಧಾನ ಪರಿಷತ್ ನ ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆ ಫಲಿತಾಂಶ ಹೊರಬಂದ ನಂತರ ದೆಹಲಿಗೆ ತೆರಳಲಿದ್ದಾರೆ.

ಸಂಪುಟ ಪುನಾರಚನೆಗೆ ಮಾನಸಿಕವಾಗಿ ಸಿದ್ಧವಾಗಿರುವ ಸಿಎಂ ಸಿದ್ದರಾಮಯ್ಯ ಪಕ್ಷದೊಳಗಿನ ಅತೃಪ್ತಿ ಹೋಗಲಾಡಿಸುವ ಪ್ರಯತ್ನ ನಡೆಸಿದ್ದಾರೆ. ಇನ್ನು ಸಂಪುಟ ಪುನಾರಚನೆ ವೇಳೆ ಕಂದಾಯ  ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಸಂಪುಟದಿಂದ ಕೈಬಿಡಬಾರದು ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆಯನ್ನು ಎದುರಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯಸಿಂಗ್‌ ತಿಳಿಸಿದರು.

ಭಾನುವಾರ ಕುಟುಂಬ ಸಮೇತ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ಮೊದಲು ಆ ರೀತಿ ಹೇಳಿರಬಹುದು, ಆದರೆ ಹಾಗಾಗುವುದಿಲ್ಲ ಎಂದರು.

ಇನ್ನೂ ಸಚಿವ ಸಂಪುಟ ಪುನಾರಚನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರೇ ಎಲ್ಲಾ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.