ಕುಮಾರಸ್ವಾಮಿ ಸಿಎಂ ಮಾಡಲು ವಿಪ್ ಉಲ್ಲಂಘನೆಗೆ ಕೈಗೊಳ್ಳದ ಕ್ರಮ ಈಗೇಕೆ?: ಶಾಸಕರ ಪ್ರಶ್ನೆ
ಜೆಡಿಎಸ್ ನಿಂದ ಅಮಾನತುಗೊಂಡಿರುವ 8 ಶಾಸಕರು ಪಕ್ಷದ ನಿರ್ಧಾರದ ಬಗ್ಗೆ ಜೂ.13 ರಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ನ್ನು ಉಲ್ಲಂಘಿಸಿ ಅನ್ಯ ಪಕ್ಷದ ಅಭ್ಯರ್ಥಿಗೆ ಮತಹಾಕಿದ್ದಕ್ಕಾಗಿ ಜೆಡಿಎಸ್ ನಿಂದ ಅಮಾನತುಗೊಂಡಿರುವ 8 ಶಾಸಕರು ಪಕ್ಷದ ನಿರ್ಧಾರದ ಬಗ್ಗೆ ಜೂ.13 ರಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಬೆಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ನಿಂದ ಅಮಾನತುಗೊಂಡಿರುವ ಶಾಸಕ ಚಲುವರಾಯಸ್ವಾಮಿ, ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ನಿಂದ ಜಾರಿಗೊಳಿಸಲಾಗಿದ್ದ ವಿಪ್ ನ್ನು ಉಲ್ಲಂಘಿಸಿ ಅನ್ಯ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ್ದಾಕ್ಕಾಗಿ ದೇವೇಗೌಡರು ಶಾಸಕರನ್ನು ಅಮಾನತುಗೊಳಿಸುವ ಆತುರದ ನಿರ್ಧಾರ ಕೈಗೊಂಡಿದ್ದಾರೆ. 2006 ರಲ್ಲಿ ಬಿಜೆಪಿ ಜೊತೆ ಸಮ್ಮಿಶ್ರ ಸರ್ಕಾರ ರಚಿಸಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಬೇಕಾದರೆ ಪಕ್ಷದ ವಿಪ್ ನ್ನು ಉಲ್ಲಂಘಿಸಿ ಮತ ಹಾಕಿದ್ದ ಮಾರಸ್ವಾಮಿ ಸೇರಿದಂತೆ ಜೆಡಿಎಸ್ ನ ಶಾಸಕರ ವಿರುದ್ಧ ದೇವೇಗೌಡರು ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದ್ದಾರೆ.
2006 ರಲ್ಲಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವ ಉದ್ದೇಶದಿಂದ ಪಕ್ಷದ ವರಿಷ್ಠ ದೇವೇಗೌಡರ ವಿರೋಧವಿದ್ದರೂ ಜೆಡಿಎಸ್ ಪಕ್ಷ ಜಾರಿಗೊಳಿಸಿದ್ದ ವಿಪ್ ನ್ನು ಉಲ್ಲಂಘಿಸಿ ಮತ ಚಲಾಯಿಸಿದ್ದೆವು, ಆಗೇಕೆ ದೇವೇಗೌಡರು ಕುಮಾರಸ್ವಾಮಿ ಹಾಗೂ ವಿಪ್ ಉಲ್ಲಂಘನೆ ಮಾಡಿದ್ದ ಜೆಡಿಎಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂಬುದಕ್ಕೆ ಸ್ಪಷ್ಟನೆ ನೀಡಬೇಕು ಎಂದು ಚೆಲುವರಾಯಸ್ವಾಮಿ ಒತ್ತಾಯಿಸಿದ್ದಾರೆ.
"ಅಮಾನತುಗೊಂಡಿರುವ ಶಾಸಕರು ದೇವೇಗೌಡರ ನೇತೃತ್ವದಲ್ಲೇ ಬೆಳೆದಿದ್ದೇವೆ, ಆದ್ದರಿಂದ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡುವುದಿಲ್ಲ, ವಿಪ್ ಉಲ್ಲಂಘನೆ ಮಾಡಿ ಮತಚಲಾಯಿಸಿದ್ದಕ್ಕೆ ದೇವೇಗೌಡರ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ತಿಥಿ ಕಾರ್ಡ್ ಪ್ರಕಟಿಸಿದ್ದಾರೆ. ನಮ್ಮ ಬೆಂಬಲಿಗರಿಗೂ ತಿಥಿ ಕಾರ್ಡ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲು ಬರುತ್ತದೆ. ಆದರೆ ಅಂತಹ ಕೆಲಸ ಮಾಡುವುದಿಲ್ಲ ಎಂದಿರುವ ಚೆಲುವರಾಯಸ್ವಾಮಿ, ಬಿಬಿಎಂಪಿ ಸೇರಿದಂತೆ ಹಲವು ವಿಷಯಗಳಲ್ಲಿ ಜೆಡಿಎಸ್ ನಲ್ಲಿ ಏಕಪಕ್ಷಿಯವಾಗಿ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಅಷ್ಟೇ ಅಲ್ಲದೇ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ, ಅನ್ಯರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ನಿರ್ಧಾರ ಕೈಗೊಂಡಿದ್ದರಿಂದ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುವುದರಿಂದ ಹಿಂದೆ ಸರಿದೆವು ಎಂದು ಚೆಲುವರಾಯ ಸ್ವಾಮಿ ವಿಪ್ ಉಲ್ಲಂಘನೆ ಮಾಡಿದ್ದಕ್ಕೆ ಸ್ಪಷ್ಟನೆ ನೀಡಿದ್ದಾರೆ..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


