ದೇವೇಗೌಡ ಕುಟುಂಬದ ವಿರುದ್ಧ 'ಮಂಡ್ಯ' ಕಾರ್ಡ್ ಪ್ಲೇ ಮಾಡಿದ ಚಲವರಾಯಸ್ವಾಮಿ
ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಜೆಡಿಎಸ್ ನಿಂದ ಅಮಾನತುಗೊಂಡಿರುವ ನಾಗಮಂಗಲ ಶಾಸಕ ಎನ್. ..

ಮೈಸೂರು: ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಜೆಡಿಎಸ್ ನಿಂದ ಅಮಾನತುಗೊಂಡಿರುವ ನಾಗಮಂಗಲ ಶಾಸಕ ಎನ್. ಚಲುವರಾಯಸ್ವಾಮಿ ದೇವೇಗೌಡರ ಕುಟುಂಬದ ವಿರುದ್ಧ ಮಂಡ್ಯ ಕಾರ್ಡ್ ಪ್ಲೇ ಮಾಡಿದ್ದಾರೆ.
ನನ್ನ ಬಗ್ಗೆ ಟೀಕೆ ಮಾಡುವವರಿಗೆ ಮೊದಲು ಮಂಡ್ಯದ ಬಗ್ಗೆ ಅರಿವಿರಬೇಕು. ಪ್ರಸಿದ್ಧ ನಟ ಅಂಬರೀಷ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಗೆಲ್ಲಿಸುವ ವಿಶ್ವಾಸ ನೀಡಿ ನನಗೆ ಗೆಲುವು ತಂದು ಕೊಟ್ಟವರು ಮಂಡ್ಯ ಜನತೆ, ಈಗ ನನ್ನನ್ನ ದೇವೇಗೌಡ ಮತ್ತು ರೇವಣ್ಣ ಟೀಕಿಸಲಿ ಎಂದು ಚಲುವರಾಯಸ್ವಾಮಿ ಸವಾಲು ಹಾಕಿದ್ದಾರೆ.
ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಅವರನ್ನು ಬಿಟ್ಟರೇ ಜಿಲ್ಲೆಯ ಉಳಿದ ಎಲ್ಲಾ ಜೆಡಿಎಸ್ ಮುಖಂಡರು ನನ್ನ ಜೊತೆ ಉತ್ತಮ ಸಂಪರ್ಕ ಹೊಂದಿದ್ದು, ಒಳ್ಳೆಯ ಒಡನಾಟವಿದೆ ಎಂದು ಅವರು ಹೇಳಿದ್ದಾರೆ.
ಮುಂದಿನ ಎರಡು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಯ ಕಡೆ ಗಮನ ಹರಿಸಲಾಗುವುದು, ಅನಂತರ ತಮ್ಮ ರಾಜಕೀಯ ಜೀವನದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


