ರಾಜಕೀಯ

ಸಚಿವ ಸ್ಥಾನಕ್ಕೆ ಕೊಕ್: ಶಾಸಕ ಸ್ಥಾನಕ್ಕೂ ಅಂಬರೀಷ್ ರಾಜೀನಾಮೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಿಂದ ತಮ್ಮನ್ನು ಕೈಬಿಡುತ್ತಿರುವುದು ಖಚಿತವಾಗುತ್ತಿದ್ದಂತೆ ರೆಬಲ್ ಆಗಿರುವ ವಸತಿ ಸಚಿವ...

ಸಚಿವ ಸ್ಥಾನಕ್ಕೆ ಕೊಕ್: ಶಾಸಕ ಸ್ಥಾನಕ್ಕೂ ಅಂಬರೀಷ್ ರಾಜೀನಾಮೆ?
ಅಂಬರೀಷ್
Published On :
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಿಂದ ತಮ್ಮನ್ನು ಕೈಬಿಡುತ್ತಿರುವುದು ಖಚಿತವಾಗುತ್ತಿದ್ದಂತೆ ರೆಬಲ್ ಆಗಿರುವ ವಸತಿ ಸಚಿವ ಅಂಬರೀಷ್ ಅವರು, ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅಂಬರೀಷ್ ಅವರು, ತನ್ನನ್ನು ಸಚಿವ ಸ್ಥಾನದಿಂದ ತೆಗೆದರೆ ಶಾಸಕ ಸ್ಥಾನಕ್ಕು ರಾಜಿನಾಮೆ ಕೊಡುವ ಇಂಗಿತ ವ್ಯಕ್ತಪಡಿಸುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ರಾಜೀನಾಮೆ ನೀಡುವ ಬಗ್ಗೆ ಬೆಂಬಲಿಗರು, ಹಿತೈಷಿಗಳ ಜೊತೆ ಅಂಬಿ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಯಾವುದೇ ಹಗರಣದಲ್ಲಿ ಭಾಗಿಯಾಗದ ಅಂಬರೀಷ್ ಅವರನ್ನು ಸಂಪುಟದಿಂದ ಕೈಬಿಡುತ್ತಿರುವುದು ಸರಿಯಲ್ಲ. ಹಗರಣದಲ್ಲಿ ಭಾಗಿಯಾದವರು ಸಂಪುಟದಲ್ಲಿದ್ದಾರೆ. ಅಂಬರೀಶ್ ಅವರನ್ನು ಸಂಪುಟದಿಂದ ತೆಗೆದರೆ ಮಂಡ್ಯದಲ್ಲಿ ಕಾಂಗ್ರೆಸ್ ಗೆ ನಷ್ಟ ಎಂದು ಅಂಬರೀಷ್ ಪರಮಾಪ್ತ ಲಿಂಗರಾಜು ಮಾಧ್ಯಮಕ್ಕೆತಿಳಿಸಿದ್ದಾರೆ.
ಇನ್ನು ಶ್ರೀರಂಗಪಟ್ಟಣದಲ್ಲಿ ಅಂಬರೀಷ್ ಅಭಿಮಾನಿಗಳು ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ವಿವಿಧೆಡೆ ಅಂಬಿ ಅಭಿಮಾನಿಗಳು ಧರಣಿ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.