ಆಗಾಗ ಸರ್ಕಾರದ ವಿರುದ್ಧ ಚಾಟಿ ಬೀಸುತ್ತಿದ್ದ ಕಾಗೋಡು ತಿಮ್ಮಪ್ಪ, ರಮೇಶ್ ಕುಮಾರ್ ಗೆ ಮಂತ್ರಿ ಭಾಗ್ಯ
ಆಗಾಗ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸುತ್ತಿದ್ದ ಸ್ಪೀಕರ್ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ...

Published On :
ಬೆಂಗಳೂರು: ಆಗಾಗ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸುತ್ತಿದ್ದ ಸ್ಪೀಕರ್ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಿ ಭಾಗ್ಯ ಕಲ್ಪಿಸಿದ್ದಾರೆ.
ಆಗಾಗ ಸರ್ಕಾರದ ಪಾರದರ್ಶಕತೆ ಪ್ರಶ್ನಿಸುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಿದ್ದರಾಮಯ್ಯ ತಮ್ಮ ಸಂಪುಟದಲ್ಲಿ ಸ್ಥಾನ ನೀಡಲು ನಿರ್ಧರಿಸಿದ್ದು, ಸಾಗರ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಅವರು ಸ್ಪೀಕರ್ ಸ್ಥಾನ ತೆರವುಗೊಳಿಸಿ ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹಲವು ಬಾರಿ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸಿದ್ದ ಕಾಗೋಡು ತಿಮ್ಮಪ್ಪ ಅವರು ಇತ್ತೀಚಿಗಷ್ಟೇ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಬಿಡಿಎಂ ಆಯುಕ್ತ ಶಾಂಭಟ್ ಅವರ ಹೆಸರು ಶಿಫಾರಸು ಮಾಡಿದ್ದ ರಾಜ್ಯ ಸರ್ಕಾರದ ನಡೆಯನ್ನೂ ವಿರೋಧಿಸಿದ್ದರು. ಅಲ್ಲದೆ ಶ್ಯಾಂ ಭಟ್ ಬಿಟ್ಟು ಬೇರೆ ಯಾರೂ ಇಲ್ಲವೆ? ಎಂದು ಪ್ರಶ್ನಿಸಿದ್ದರು.
ಇನ್ನು ಅಧಿವೇಶನದಲ್ಲೇ ಪ್ರತಿಪಕ್ಷಗಳಂತೆ ಸರ್ಕಾರವನ್ನು ಆಗಾಗ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಶ್ರೀನಿವಾಸಪುರ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ನಿರ್ಧರಿಸಿದ್ದು, ನಾಳೆ ಅವರು ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


