ಯು.ಟಿ ಖಾದರ್ ಕ್ರಿಯಾಶೀಲ ಸಚಿವ: ಸೋನಿಯಾ ಗಾಂಧಿ ಶಹಬ್ಬಾಸ್ ಗಿರಿ
ಆರೋಗ್ಯ ಸಚಿವ ಯುಟಿ ಖಾದರ್ ಕ್ರಿಯಾಶೀಲ ಸಚಿವ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶಹಬ್ಬಾಸ್ ಗಿರಿ ನೀಡಿದ್ದಾರೆ.

ನವದೆಹಲಿ: ಸಂಪುಟ ಪುನಾರಚನೆ ವೇಳೆ ಆರೋಗ್ಯ ಸಚಿವ ಯು.ಟಿ ಖಾದರ್ ಅವರನ್ನು ಕೈ ಬಿಟ್ಟು ಅವರ ಖಾತೆಯನ್ನು ಶಾಸಕ ಹ್ಯಾರಿಸ್ ಅವರಿಗೆ ನೀಡಲಾಗುತ್ತದೆ ಎಂಬ ವದಂತಿಗಳು ಕೇಳಿ ಬಂದಿದ್ದವು. ಆರೋಗ್ಯ ಸಚಿವ ಯುಟಿ ಖಾದರ್ ಕ್ರಿಯಾಶೀಲ ಸಚಿವ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶಹಬ್ಬಾಸ್ ಗಿರಿ ನೀಡಿದ್ದಾರೆ.
ಜೊತೆಗೆ ಯುಟಿ ಖಾದರ್ ಅವರನ್ನು ಸಂಪುಟದಲ್ಲಿ ಮುಂದುವರಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೋನಿಯಾ ಗಾಂಧಿ ಸೂಚನೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.ಕ್ರಿಯಾಶೀಲ ಸಚಿವರನ್ನು ಸಂಪುಟದಿಂದ ಕೈಬಿಡಬಾರದು ಎಂದು ಸೋನಿಯಾ ಗಾಂಧಿ ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ. ಸಚಿವ ಸಂಪುಟ ಪುನಾರಚನೆಯಲ್ಲಿ ಕೈಬಿಡಲಿರುವ ಪಟ್ಟಿಯಲ್ಲಿ ಯುಟಿ ಖಾದರ್ ಅವರ ಹೆಸರೂ ಕೂಡಾ ಇತ್ತು ಎನ್ನಲಾಗಿದೆ.
ಯುಟಿ ಖಾದರ್ ತಮ್ಮ ಕ್ರಿಯಾಶೀಲ ಸಚಿವ, ಮೂರು ವರ್ಷಗಳ ಅವಧಿಯಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಅಂತಹ ಸಚಿವರನ್ನು ಕೈ ಬಿಡಲು ಸಾಧ್ಯವೇ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


