ಶಾಸಕ ಸ್ಥಾನಕ್ಕೆ ರಾಜಿನಾಮೆ: ರೆಬಲ್ ಸ್ಟಾರ್ ಅಂಬಿಗೆ ಸಿಎಂ ಕರೆ
ಸಚಿವ ಸಂಪುಟದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಆಕ್ರೋಶಗೊಂಡು ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಿರುವ ಮಾಜಿ ವಸತಿ ಸಚಿವ ರೆಬಲ್ ಸ್ಟಾರ್ ಅಂಬರೀಷ್

Published On :
ಬೆಂಗಳೂರು: ಸಚಿವ ಸಂಪುಟದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಆಕ್ರೋಶಗೊಂಡು ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಿರುವ ಮಾಜಿ ವಸತಿ ಸಚಿವ ರೆಬಲ್ ಸ್ಟಾರ್ ಅಂಬರೀಷ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದೂರವಾಣಿ ಮೂಲಕ ಮಾತನಾಡಿದ್ದು, ರಾಜಿನಾಮೆ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.
ಇಂದು ಮಧ್ಯಾಹ್ನ ಅಂಬರೀಷ್ ಅವರಿಗೆ ಕರೆ ಮಾಡಿದ ಸಿಎಂ, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.
ಇಂದು ಬೆಳಗ್ಗೆ ಮಂಡ್ಯ ಕ್ಷೇತ್ರದ ಶಾಸಕನಾಗಿರುವ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂಬ ಒಂದೇ ಸಾಲಿನ ರಾಜಿನಾಮೆ ಪತ್ರವನ್ನು ಅಂಬರೀಷ್ ಅವರು ತಮ್ಮ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂಲಕ ಉಪಾ ಸಭಾಧ್ಯಕ್ಷ ಶಿವಶಂಕರ ರೆಡ್ಡಿ ಅವರಿಗೆ ಸಲ್ಲಿಸಿದ್ದರು. ಆದರೆ ರಾಜಿನಾಮೆಯನ್ನು ಅಂಗೀಕರಿಸಲು ನಿರಾಕರಿಸಿರುವ ರೆಡ್ಡಿ, ಖುದ್ದು ಅಂಬರೀಷ್ ಅವರೇ ಬಂದು ರಾಜೀನಾಮೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಈ ಮಧ್ಯೆ, ಅಂಬರೀಷ್ ಅವರು ಖುದ್ದಾಗಿ ಬಂದು ರಾಜೀನಾಮೆ ಕೊಡುತ್ತಾರಾ? ಅಥವಾ ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿಯುತ್ತಾರಾ ಎಂಬ ಬಗ್ಗೆ ನಾಳೆ ಬೆಳಗ್ಗೆ ಮಂಡ್ಯದಲ್ಲಿ ಅಂಬರೀಷ್ ಅವರು ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಲಿದೆ.
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡದಂತೆ ಅಂಬಿಗೆ ದೇವೇಗೌಡ ಸಲಹೆ
ನನಗೆ ಮಾಹಿತಿ ನೀಡದೆ ಸಚಿವ ಸ್ಥಾನವನ್ನು ಕಿತ್ತುಕೊಂಡಿದ್ದಾರೆ ಎಂದು ಅಂಬರೀಷ್ ಅವರು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ ಡಿ.ದೇವೇಗೌಡರ ಬಳಿ ಅಳಲು ತೋಡಿಕೊಂಡಿದ್ದು, ನೀನಿನ್ನೂ ಬೆಳೆಯಬೇಕಾದ ವ್ಯಕ್ತಿ. ದುಡುಕಿನ ನಿರ್ಧಾರ ಕೈಗೊಳ್ಳಬೇಡ ಎಂದು ದೇವೇಗೌಡರು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


