ರಮ್ಯ ರಾಜಕೀಯದ ವೇಗದ ಓಟಕ್ಕೆ ಅಂಬರೀಷ್ ಹಾಕಿದ್ರಾ ಬ್ರೇಕ್?
ಸಂಪುಟ ಪುನಾರಚನೆ ಮಾಡಿ ವಿಲವಿಲ ಒದ್ದಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಇದೆಲ್ಲದರ ಮಧ್ಯೆ ರೆಬೆಲ್ ಸ್ಟಾರ್ ಅಂಬರೀಷ್ ಹೈ ಕಮಾಂಡ್ ಮುಂದೆ ಷರತ್ತುಗಳನ್ನಿಟ್ಟಿದ್ದರು..

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ವಿಲವಿಲ ಒದ್ದಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ.
ಇತ್ತ ಬಂಡಾಯ ಶಾಸಕರ ಭಿನ್ನಮತವೂ ಶಮನವಾಗಿದೆ. ಇದೆಲ್ಲದರ ಮಧ್ಯೆ ರೆಬೆಲ್ ಸ್ಟಾರ್ ಅಂಬರೀಷ್ ಹೈ ಕಮಾಂಡ್ ಮುಂದೆ ಷರತ್ತುಗಳನ್ನಿಟ್ಟಿದ್ದರು ಎನ್ನಲಾಗಿದೆ.
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರನ್ನು ಪರಿಷತ್ ಗೆ ನಾಮ ನಿರ್ದೇಶನ ಮಾಡಬಾರದು , ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದರು, ಈ ಬೇಡಿಕೆಗಳಿಗೆ ಹೈಕಮಾಂಡ್ ಅಸ್ತು ಎಂದಿದೆ. ಈ ಹಿನ್ನೆಲೆಯಲ್ಲಿ ಬಂಡಾಯ ಶಾಸಕರ ಭಿನ್ನಮತ ಶಮನವಾಗಿದೆ ಎನ್ನಲಾಗಿದೆ.
ನಾಯಕತ್ವ ಬದಲಾವಣೆಯ ಕೂಗು ದೊಡ್ಡದಿದ್ದರೂ ಅತೃಪ್ತ ಶಾಸಕರ ಸಂಖ್ಯೆ ಮಾತ್ರ ಬೆರಳೆಣಿಕೆಯಷ್ಟಿದೆ. ಅತೃಪ್ತರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಮೂಗಿಗೆ ತುಪ್ಪ ಸವರಿರುವ ಸಿಎಂ ಸಿದ್ದರಾಮಯ್ಯ ಮತ್ತೆ ಪ್ರಾಬಲ್ಯ ಮೆರೆಯುವಲ್ಲಿ ಯಶಸ್ವಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


