ಸಿದ್ದರಾಮಯ್ಯ ಜೊತೆ ಮಾತುಕತೆ ಮುಗಿದ ಅಧ್ಯಾಯ: ಶ್ರೀನಿವಾಸ್ ಪ್ರಸಾದ್
ಅಂಬರೀಶ್ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಂಡರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ವಿಚಾರ ಸ್ಪಷ್ಟವಾಗಿದೆ. ಯಾವುದೇ ಕಾರಣಕ್ಕೂ ಹೆಜ್ಜೆ ..

ಬೆಂಗಳೂರು; ನಾಯಕತ್ವ ಬದಲಾವಣೆಯಾಗಬೇಕೆಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಭಿನ್ನಮತೀಯ ಗುಂಪಿನ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನಮ್ಮನ್ನು ಭೇಟಿಯಾಗಲಿದ್ದು, ಆ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಅವರಿಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಭಿನ್ನಮತೀಯರ ಸಂಖ್ಯೆ ಕ್ಷೀಣಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ನಾವು ಸಂಖ್ಯಾಬಲದ ಮೇಲೆ ನಾಯಕತ್ವದ ಬದಲಾವಣೆ ಕೇಳುತ್ತಿಲ್ಲ.ಯಾವ ಕಾರಣಕ್ಕೆ ನಾಯಕತ್ವ ಬದಲಾವಣೆಯಾಗಬೇಕು, ಮುಖ್ಯಮಂತ್ರಿಗಳ ನಿರ್ಧಾರದಿಂದ ಪಕ್ಷಕ್ಕೆ ಎಷ್ಟೆಲ್ಲಾ ಹಾನಿಯಾಗಿದೆ ಎಂಬ ಅಂಶಗಳನ್ನು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.
ಅಂಬರೀಶ್ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಂಡರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ವಿಚಾರ ಸ್ಪಷ್ಟವಾಗಿದೆ. ಯಾವುದೇ ಕಾರಣಕ್ಕೂ ಹೆಜ್ಜೆ ಹಿಂದಿಡುವುದಿಲ್ಲ ಎಂದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿದ್ದೇನೆ.
ಪಕ್ಷದ ಇತರ ಎಲ್ಲಾ ನಾಯಕರ ಜೊತೆ ಚರ್ಚಿಸಬೇಕಾಗುತ್ತದೆ. ಭಿನ್ನರ ಗುಂಪಿಗೆ ಬೆಂಬಲ ನೀಡಲು ಕೃಷ್ಣ ಅವರು ನಿರಾಕರಿಸುತ್ತಾರೆ ಎಂಬ ವದಂತಿಗಳು ಸುಳ್ಳು ಎಂದು ಶ್ರೀನಿವಾಸ್‌ಪ್ರಸಾದ್ ಸ್ಪಷ್ಟಪಡಿಸಿದರು. ನಾನು ನನ್ನ ಮತ್ತು ಸಿದ್ದರಾಮಯ್ಯ ಅವರ ನಡುವಿನ ಮಾತುಕತೆ ಮುಗಿದ ಅಧ್ಯಾಯ. ಇನ್ನು ಮುಂದೆ ನಾನು ಅವರನ್ನು ಮಾತನಾಡಿಸುವುದಿಲ್ಲ, ಅವರೂ ನನ್ನನ್ನು ಮಾತನಾಡಿಸುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


