ರಾಜಕೀಯ

ಬಿಜೆಪಿ ಅತೃಪ್ತರಿಂದ ಬಿಎಸ್ ವೈ, ಶೋಭಾ ವಿರುದ್ಧ ಹೈಕಮಾಂಡ್, ಆರ್ ಎಸ್ಎಸ್ ಗೆ ದೂರು

ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ತಾರಕ್ಕಕ್ಕೇರಿದ್ದು, ಅತೃಪ್ತ ಬಿಜೆಪಿ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದೆ ಶೋಭಾ...

ಬಿಜೆಪಿ ಅತೃಪ್ತರಿಂದ ಬಿಎಸ್ ವೈ, ಶೋಭಾ ವಿರುದ್ಧ ಹೈಕಮಾಂಡ್, ಆರ್ ಎಸ್ಎಸ್ ಗೆ ದೂರು
ಶೋಭಾ ಕರಂದ್ಲಾಜೆ - ಬಿ.ಎಸ್.ಯಡಿಯೂರಪ್ಪ
Published On :
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ತಾರಕ್ಕಕ್ಕೇರಿದ್ದು, ಅತೃಪ್ತ ಬಿಜೆಪಿ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪಕ್ಷದ ಹೈಕಮಾಂಡ್ ಗೆ ಹಾಗೂ ಆರ್ ಎಸ್ಎಸ್ ಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ನಾಳೆ ಬಿಎಸ್ ವೈ ಕರೆದಿರುವ ಬಿಜೆಪಿ ಪದಾಧಿಕಾರಿಗಳ, ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಸಭೆಯಲ್ಲಿ ಭಾಗವಹಿಸದಿರಲು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆಎಸ್ ಈಶ್ವರಪ್ಪ ನಿರ್ಧರಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಯಡಿಯೂರಪ್ಪ ಅವರು ಪಕ್ಷದ ಪದಾಧಿಕಾರಿಗಳ ನೇಮಕಾತಿ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೇ ಆರ್ ಎಸ್ ಎಸ್ ಸೂಚಿಸಿದವರನ್ನೂ ಪರಿಗಣಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್,  ಆರ್ ಎಸ್ ಎಸ್ ಸಹ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರಿಗೆ ಅತೃಪ್ತರು ದೂರು ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಇನ್ನು ನಾಳೆ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಪಕ್ಷದ ಪದಾಧಿಕಾರಿಗಳು, ಶಾಸಕ, ಸಂಸದರ ಸಭೆಯಲ್ಲಿ ಭಾಗವಹಿಸಬೇಕೆ, ಬೇಡವೇ ಎಂಬುದರ ಬಗ್ಗೆ ಇಂದು ಕೆಎಸ್ ಈಶ್ವರಪ್ಪ ಅವರ ಬೆಂಗಳೂರು ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ವೇಳೆ ನಾಳಿನ ಸಭೆಯಲ್ಲಿ ಭಾಗವಹಿಸದಿರಲು ಈಶ್ವರಪ್ಪ ಬಣ ನಿರ್ಧರಿಸಿದೆ ಎನ್ನಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ನಮಗೆ ಯಾರ ಮೇಲೂ ವೈಯಕ್ತಿಕ ದ್ವೇಷ ಮತ್ತು ಪ್ರೀತಿ ಇಲ್ಲ. ಯಡಿಯೂರಪ್ಪ ಅವರ ಏಕಪಕ್ಷೀಯ ನಿರ್ಧಾರಕ್ಕೆ ನಮ್ಮ ವಿರೋಧವಿದೆ. ಪದಾಧಿಕಾರಿಗಳ ಆಯ್ಕೆ ಮಾಡುವ ಮುನ್ನ ಕೋರ್ ಕಮಿಟಿ ಸಭೆಯ ಗಮನಕ್ಕೆ ತರಬೇಕಿತ್ತು. ಆದರೆ ಅವರು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು. ಅಲ್ಲದೆ ನಮ್ಮ ಪಕ್ಷ ಶಿಸ್ತಿನ ಪಕ್ಷ, ನಾವು ಶಿಸ್ತಿನಿಂದ ಪಕ್ಷವನ್ನು ಕಟ್ಟುತ್ತೇವೆ. ಆ ನಿಟ್ಟಿನಲ್ಲಿ ಇಂದು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.
ಶೋಭಾ ಬಾಯಿಗೆ ಬೀಗ ಹಾಕಿಸಬೇಕು
ಶೋಭಾ ಕರಂದ್ಲಾಜೆ ಎಲ್ಲಾ ಚಾನೆಲ್ ಗೂ ಸಂದರ್ಶನ ಕೊಟ್ಟು, ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಶೋಭಾ ಬಾಯಿಗೆ ಬೀಗ ಹಾಕುವಂತೆ ವರಿಷ್ಠರಿಗೆ ದೂರು ನೀಡಬೇಕೆಂದು ಸಭೆಯಲ್ಲಿ ಹಲವು ಮುಖಂಡರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.