ಸದನದಲ್ಲಿ ವಾಚ್ ಯುದ್ಧ ಕೈ ಬಿಡಲು ಪ್ರತಿಪಕ್ಷಗಳ ನಿರ್ಧಾರ
ಎಂ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಗಳಲ್ಲಿ ಧರಣಿ ಕೈಬಿಡಲು ಜೆಡಿಎಸ್ ಹಾಗೂ ಬಿಜೆಪಿ ನಿರ್ಧರಿಸಿದೆ...

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸರ್ಕಾರದಿಂದ ಸ್ಪಷ್ಟ ಉತ್ತರ ಕೊಡಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಗಳಲ್ಲಿ ಧರಣಿ ಕೈಬಿಡಲು ಜೆಡಿಎಸ್ ಹಾಗೂ ಬಿಜೆಪಿ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕವಾಗಿ, ಹಲವು ದಿನಗಳಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ದುಬಾರಿ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಮಂಡಲದ ಉಭಯ ಸದನಗಳಲ್ಲೂ ಪ್ರತಿಭಟನೆ ಕೈ ಬಿಡಲು ಪ್ರತಿಪಕ್ಷಗಳು ತೀರ್ಮಾನಿಸಿವೆ.
ದುಬಾರಿ ವಾಚ್ ಪ್ರಕರಣ ಪ್ರಸ್ತಾಪಿಸಿ ಸಭಾತ್ಯಾಗ ಮಾಡುವ ಬಗ್ಗೆ ಬಿಜೆಪಿ ಈ ಮೊದಲು ನಿರ್ಧರಿಸಿತ್ತು. ಆದರೆ ಈ ಚರ್ಚೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಗದ್ದಲ ಸಾರ್ವಜನಿಕವಾಗಿ ಅಪಾರ್ಥಕ್ಕೆ ಎಡೆ ಮಾಡಿಕೊಡಲಿದೆ ಎಂಬ ಆತಂಕದಿಂದಾಗಿ ಬಿಜೆಪಿ ಮತ್ತು ಜೆಡಿಎಸ್ ಸ್ಪೀಕರ್ ಕಾಗೋಡು ನೀಡಿದ ಭರವಸೆ ಹಿನ್ನೆಲೆಯಲ್ಲಿ ಧರಣಿ ಕೈಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಟ್ಟಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಚನ್ನು ಬುಧವಾರ ಸರ್ಕಾರಕ್ಕೆ ಹಸ್ತಾಂತರಿಸಿ ವಿವಾದಕ್ಕೆ ತೆರೆ ಎಳೆದಿದ್ದರು. ಆದರೆ ಇದು ಪ್ರತಿಪಕ್ಷಗಳಿಗೆ ಸಮಾಧಾನ ತಂದಿಲ್ಲವಾಗಿತ್ತು. ಹಾಗಾಗಿ ಗುರುವಾರವೂ ವಾಚ್ ವಿಚಾರದಲ್ಲಿ ಸ್ಪಷ್ಟ ಉತ್ತರಕ್ಕೆ ಪಟ್ಟು ಹಿಡಿಯುವ ಬಗ್ಗೆ ನಿರ್ಧರಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


