ರಾಜಕೀಯ ತೊರೆಯಬೇಡಿ: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಮನವಿ
ರಾಜಕೀಯ ಸನ್ಯಾಸತ್ವ ತೆಗೆದುಕೊಂಡರೇ ಕಾರ್ಯಕರ್ತರು ಹಾಗೂ ಪಕ್ಷದ ಗತಿಯೇನು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಇಂಧನ ಸಚಿವ...

ಬೆಂಗಳೂರು: ಒಂದು ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ರಾಜಕೀಯ ಬಿಡಬಾರದು. ನೀವು ರಾಜಕೀಯ ಸನ್ಯಾಸತ್ವ ತೆಗೆದುಕೊಂಡರೇ ಕಾರ್ಯಕರ್ತರು ಹಾಗೂ ಪಕ್ಷದ ಗತಿಯೇನು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಹಲವು ದಶಕಗಳಿಂದ ಎಚ್ .ಡಿ ದೇವೇಗೌಡ ಹಾಗೂ ಡಿ.ಕೆ ಶಿವಕುಮಾರ್ ಕುಟುಂಬದ ನಡುವೆ ಇರುವ ರಾಜಕೀಯ ವೈರತ್ವ ಜಗಜ್ಜಾಹೀರಾಗಿರುವ ಸಂಗತಿ. ಮುಂದಿನ ಚುನಾವಣೆಯಲ್ಲಿ ಗೆಲ್ಲದಿದ್ದರೇ ರಾಜಕೀಯ ನಿವೃತ್ತಿ ತೆಗೆದು ಕೊಳ್ಳುವುದಾಗಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್ ನೀವು ರಾಜಕೀಯ ಬಿಡಬಾರದು, ಚುನಾವಣೆಯಲ್ಲಿ ಸೋಲು ಗೆಲುವು ಇದ್ದಿದ್ದೇ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ರಾಜಕೀಯ ಸನ್ಯಾಸ ತೆಗೆದುಕೊಂಡರೆ ಕಾರ್ಯಕರ್ತರ ಪಾಡೇನು. ಜನಸೇವೆ ಮಾಡಲು ಅಧಿಕಾರದಲ್ಲೇ ಇರಬೇಕು ಎಂದೇನಿಲ್ಲ. ಅಧಿಕಾರ ಇದ್ದರೆ ಮಾತ್ರ ಈ ಕೆಲಸ ಸಾಧ್ಯ ಎನ್ನುವುದು ಕುಮಾರಸ್ವಾಮಿಯವರ ತಪ್ಪುಗ್ರಹಿಕೆ ಎಂದು ಹೇಳಿದ್ದಾರೆ.
ರಾಜಕೀಯದ ಜೊತೆಗೆ ಸಿನಿಮಾ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಡಿಕೆಶಿವಕುಮಾರ್ ಸಲಹೆ ನೀಡಿದ್ದಾರೆ. ಹಳೇ ಮೈಸೂರು ಭಾಗ ಹಳೇ ಮೈಸೂರು ಭಾಗದಲ್ಲಿ ನಮಗೆ ಸಾಕಷ್ಟು ಪೈಪೋಟಿ ನೀಡುವ ಪಕ್ಷವೆಂದರೆ ಅದು ಜೆಡಿಎಸ್. ಒಂದು ಚುನಾವಣೆಯಲ್ಲಿ ಯಶಸ್ಸು ಸಿಗಲಿಲ್ಲ ಎಂದು ನಿವೃತ್ತಿಯ ವಿಚಾರ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


