ಎಸಿಬಿ ರಚನೆ ವಿರೋಧಿಸಿ ಸದನದಲ್ಲಿ ಪ್ರತಿಪಕ್ಷಗಳ ಧರಣಿ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ರಚನೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸದನದಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್...

Published On :
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ರಚನೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸದನದಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ನಡೆಸಿದರು.
ಎಸಿಬಿ ರಚನೆ ಅಧಿಸೂಚನೆಯನ್ನು ಹಿಪಂಡೆಯಬೇಕು ಎಂದು ವಿರೋಧ ಪಕ್ಷಗಳ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿತು. ಇದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದೆ ಧರಣಿ ನಡೆಸಿದರು. ಈ ಹಿನ್ನಲೆಯಲ್ಲಿ ಸ್ಪೀಕರ್ ಸದನವನ್ನು ಮಂಗಳವಾರಕ್ಕೆ ಮುಂದೂಡಿದರು.
ಮುಖ್ಯಮಂತ್ರ ಅವರೂ ಸೇರಿದಂತೆ ಅವರ ಸಂಪುಟದ ಹಲವು ಸದಸ್ಯರ ವಿರುದ್ದ ಹಲವು ಪ್ರಕರಣಗಳು ದಾಖಲಾಗಿದ್ದು, ಅವರ ವಿರುದ್ಧ ತನಿಖೆ ನಡೆಯದಂತೆ ನೋಡಿಕೊಳ್ಳಲು ಈ ಹುನ್ನಾರ ನಡೆಸಲಾಗಿದೆ ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.
ಚರ್ಚೆಯ ವೇಳೆ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಟಿಬಿ ಜಯಚಂದ್ರ, ಚಿವರು, ಶಾಸಕರ ವಿರುದ್ಧ ದೂರು ಬಂದರೆ ದಾಖಲಿಸುವ ಅಧಿಕಾರ ಈಗಲೂ ಲೋಕಾಯುಕ್ತಕ್ಕಿದೆ. ಅಲ್ಲಿನ ಪೊಲೀಸ್ ವಿಭಾಗವು ಎಂದಿನಂತೆ ಇರಲಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕೇಸುಗಳಷ್ಟೇ ಲೋಕಾಯುಕ್ತದಿಂದ ಎಸಿಬಿಗೆ ಹಸ್ತಾಂತರವಾಗಲಿದೆ, ಹಾಗಾಗಿ, ಲೋಕಾಯುಕ್ತದ ಅಧಿಕಾರ ಕಸಿದುಕೊಳ್ಳಲಾಗುತ್ತಿದೆ ಎಂಬ ಆರೋಪದಲ್ಲಿ ಹುಳಿಲ್ಲ ಎಂದು ಹೇಳಿದ್ದಾರೆ.
ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ತನಿಖೆ ನಡೆಸುವ ಅಧಿಕಾರವನ್ನು 1991ರಲ್ಲಿ ಸರ್ಕಾರಿ ಆದೇಶವೊಂದರ ಮೂಲಕ ಲೋಕಾಯುಕ್ತ ಪೊಲೀಸರಿಗೆ ನೀಡಲಾಗಿತ್ತು. ಅದನ್ನು ಹಿಂಪಡೆದು ಎಸಿಬಿಗೆ ವಹಿಸಿದ್ದೇವೆ. ಇಧರಿಂದ ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರ ಅಧಿಕಾರಕ್ಕೇನೂ ಚ್ಯುತಿ ಇಲ್ಲ ಎಂದ ಅವರು, 10984ರ ಲೋಕಾಯುಕ್ತ ಕಾಯ್ದೆ ಕಲಂ 15(1)ರಂತೆ ಲೋಕಾಯುಕ್ತಕ್ಕೆ ನೀಡಿರುವ ಅಧಿಕಾರಿಗಳು, ಸಿಬ್ಬಂದಿ, ವಿಚಾರಣಾ ಶಾಖೆ, ತಾಂತ್ರಿಕ ಶಾಖೆ ಹಾಗೂ ಪೊಲೀಸ್ ಶಾಖೆಗಳು ಹಾಗೂ ಸಿಬ್ಬಂದಿ ಯಥಾವತ್ತಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


