ಪಕ್ಷ ನನಗೆ ಯಾವ ಹೊಣೆ ವಹಿಸಿದರೂ ನಿರ್ವಹಿಸುತ್ತೇನೆ: ರಮ್ಯಾ
ನಾನು ಯಾವುದೇ ಹುದ್ದೆ ಬಯಸುವುದಿಲ್ಲ. ಪಕ್ಷಕ್ಕೆ ಒಳಿತಾಗುತ್ತದೆ ಎಂದಾದರೆ, ಎಂಎಲ್‌ಎ, ಎಂಎಲ್‌ಸಿ, ಎಂಪಿ ಯಾವ ಸ್ಥಾನ ನನಗೆ ನೀಡಿದರೂ ..

ಬೆಂಗಳೂರು: ನಾನು ಯಾವುದೇ ಹುದ್ದೆ ಬಯಸುವುದಿಲ್ಲ. ಪಕ್ಷಕ್ಕೆ ಒಳಿತಾಗುತ್ತದೆ ಎಂದಾದರೆ, ಎಂಎಲ್‌ಎ, ಎಂಎಲ್‌ಸಿ, ಎಂಪಿ ಯಾವ ಸ್ಥಾನ ನನಗೆ ನೀಡಿದರೂ ನಿರ್ವಹಿಸುತ್ತೇನೆ ಎಂದು ಸ್ಯಾಂಡಲ್‌ವುಡ್ ನಟಿ, ಹಾಗೂ ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ಯಾವ ಹೊಣೆ ವಹಿಸಿದರೆ ಒಳಿತು ಎಂಬುದನ್ನು ಪಕ್ಷದ ನಾಯಕರೇ ತೀರ್ಮಾನಿಸುತ್ತಾರೆ. ಇಂಥ ಸ್ಥಾನ ಕೊಡಿ ಎಂದು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜಕೀಯದಲ್ಲಿರುವ ಪ್ರತಿಯೊಬ್ಬ ಮಹಿಳೆ ಬೆಳೆಯುವುದು ತುಂಬಾ ಕಷ್ಟ. ರಾಜಕೀಯದಲ್ಲಿ ಮಹಿಳೆಯರನ್ನು ತುಳಿಯುವುದೇ ಹೆಚ್ಚು. ಸಂಸದೆಯಾಗಿ ಆಯ್ಕೆಯಾಗುವುದಕ್ಕೆ ನನಗೆ ಕಷ್ಟವಾಗಲಿಲ್ಲ. ಆದರೆ, ರಾಜಕೀಯವಾಗಿ ಬೆಳೆಯಲು ತುಂಬಾ ಕಷ್ಟವಾಗುತ್ತಿದೆ. ಮಹಿಳೆ ಎನ್ನುವ ಕಾರಣಕ್ಕೆ ಎಲ್ಲರು ತುಳಿಯುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


