ಕೊಂಡ ಹಾಯುವ ಸಂಪ್ರದಾಯ ನಿಷೇಧಿಸಲು ಸರ್ಕಾರ ಚಿಂತನೆ: ಸಿದ್ದರಾಮಯ್ಯ
ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವ 'ಕೆಂಡದ ಮೇಲೆ ನಡೆದಾಡುವ ಮಾರಕ' ಕೊಂಡ ಹಾಯುವ ಧಾರ್ಮಿಕ ಆಚರಣೆ ರಾಜ್ಯದಲ್ಲಿ ನಿಷೇಧಗೊಳ್ಳಲಿದೆ ಎಂದು ಮುಖ್ಯಮಂತ್ರಿ...

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವ 'ಕೆಂಡದ ಮೇಲೆ ನಡೆದಾಡುವ ಮಾರಕ' ಕೊಂಡ ಹಾಯುವ ಧಾರ್ಮಿಕ ಆಚರಣೆ ರಾಜ್ಯದಲ್ಲಿ ನಿಷೇಧಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,
ತುಮಕೂರಿನ ಹೆತ್ತೇನಹಳ್ಳಿ ಶ್ರೀ ಆದಿಶಕ್ತಿ ಮಾರಮ್ಮ ದೇವಸ್ಥಾನದಲ್ಲಿ ನಡೆದ ಕೊಂಡ ಹಾಯುವ ಆಚರಣೆ ವೇಳೆ ಮೃತರು ಮತ್ತು ಗಾಯಗೊಂಡವರಿಗೆ ಪರಿಹಾರ ಹೆಚ್ಚಳ ಮಾಡಬೇಕು ಎಂಬ ವಿಪಕ್ಷಗಳ ಆಗ್ರಹವನ್ನು ತಿರಸ್ಕರಿಸಿ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೌಢ್ಯಾಚರಣೆಗೆ ಸಾಕ್ಷಿಯಾದ ಕೊಂಡ ಹಾಯುವಂತಹ ಆಚರಣೆಗಳಲ್ಲಿ ನಡೆದ ಅನಾಹುತಗಳಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ನೀಡಿದರೆ ಅದು ಪರೋಕ್ಷವಾಗಿ ಇಂತಹ ಆಚರಣೆಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು
ಹೆತ್ತೇನಹಳ್ಳಿಯ ಘಟನೆಯಲ್ಲಿ ಮೃತಪಟ್ಟ ಮೂವರ ಕುಟುಂಬಕ್ಕೆ 2 ಲಕ್ಷ ರೂ. ಗಾಯಗೊಂಡವರಿಗೆ 25,000 ರೂ., ಮತ್ತು ಸಣ್ಣ ಪುಟ್ಟ ಗಾಯಗೊಂಡವರಿಗೆ 10,000 ರೂ. ಪರಿಹಾರ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ ಎಂದರು. ಈ ಆಚರಣೆಯನ್ನು ನಿಷೇಧ ಮಾಡಿ ಎಂದು ಜೆಡಿಎಸ್ ಸದಸ್ಯರು ಆಗ್ರಹಿಸಿದಾಗ, ಆಯ್ತು, ಈ ಆಚರಣೆಯನ್ನು ರಾಜ್ಯದಲ್ಲಿ ನಿಷೇಧಿಸಲಾಗುವುದು ಎಂದು ಸಿಎಂ ಪ್ರಕಟಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


