ಲೋಕಾಯುಕ್ತ ಬಲವರ್ಧನೆಗೆ ಬಿಜೆಪಿಯಿಂದ ಧರ್ಮಯುದ್ಧ: ಬಿಎಸ್ ವೈ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಖಂಡಿಸಿದ ಬಿಜೆಪಿ, ಲೋಕಾಯುಕ್ತ ಬಲವರ್ಧನೆಗೆ...

Published On :
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಖಂಡಿಸಿದ ಬಿಜೆಪಿ, ಲೋಕಾಯುಕ್ತ ಬಲವರ್ಧನೆಗೆ ಧರ್ಮಯುದ್ಧ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಎಸಿಬಿ ರಚನೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ನಾಯಕರು ಸೋಮವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ ಅನಂತ್ ಕುಮಾರ್, ಜಗದೀಶ್ ಶೆಟ್ಟರ್, ಆರ್ ಅಶೋಕ್, ಸಿಟಿ ರವಿ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.
ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಸಲುವಾಗಿ ಕಾಂಗ್ರೆಸ್ ಎಸಿಬಿಯನ್ನು ರಚನೆ ಮಾಡಿದೆ. ಆದರೆ, ಲೋಕಾಯುಕ್ತ ಬಲವರ್ಧನೆಗಾಗಿ ಬಿಜೆಪಿ ಧರ್ಮಯುದ್ಧ ನಡೆಸಲಿದೆ ಎಂದ ಅವರು, ಈ ಕುರಿತು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸುವುದಾಗಿ ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ.
ಎಸಿಬಿ ರಚನೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ಸಚಿವ ಸಂಪುಟದ ಸಚಿವರ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಸಲುವಾಗಿ ಈ ರೀತಿಯ ಹಠಮಾರಿ ಧೋರಣೆ ತಾಳಿದೆ. ಹಾಗಾಗಿ, ಎಸಿಬಿ ರಚನೆ ಕೈಬಿಡುವ ತನಕ ರಾಜ್ಯಾದ್ಯಂತ ವಿವಿಧ ಹಂತದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


