ರಾಜಕೀಯ

ಬಿಎಸ್ ವೈ ಭೇಟಿ ಮಾಡಿದ ಧನಂಜಯ್ ಕುಮಾರ್, ಮತ್ತೆ ಬಿಜೆಪಿ ಸೇರ್ಪಡೆ

ಮಾಜಿ ಕೇಂದ್ರ ಸಚಿವ ವಿ. ಧನಂಜಯ್ ಕುಮಾರ್ ಅವರು ಮತ್ತೆ ಬಿಜೆಪಿ ಸೇರಲು ನಿರ್ಧರಿಸಿದ್ದು, ಈ ಸಂಬಂಧ ಬುಧವಾರ ಡಾಲರ್ಸ್ ಕಾಲೋನಿಯಲ್ಲಿರುವ...

ಬಿಎಸ್ ವೈ ಭೇಟಿ ಮಾಡಿದ ಧನಂಜಯ್ ಕುಮಾರ್, ಮತ್ತೆ ಬಿಜೆಪಿ ಸೇರ್ಪಡೆ
ಧನಂಜಯ್ ಕುಮಾರ್
Published On :
ಬೆಂಗಳೂರು: ಮಾಜಿ ಕೇಂದ್ರ ಸಚಿವ ವಿ. ಧನಂಜಯ್ ಕುಮಾರ್ ಅವರು ಮತ್ತೆ ಬಿಜೆಪಿ ಸೇರಲು ನಿರ್ಧರಿಸಿದ್ದು, ಈ ಸಂಬಂಧ ಬುಧವಾರ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಬಿಎಸ್ ವೈ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧನಂಜಯ್ ಕುಮಾರ್, ಯಡಿಯೂರಪ್ಪ ಅವರು ತಮ್ಮನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಯಸಿದ್ದಾರೆ ಮತ್ತು ಪಕ್ಷದ ಸಂಘಟನೆಯ ದೃಷ್ಟಿಯಿಂದ ಪಕ್ಷದ ಹಿರಿಯ ನಾಯಕರೂ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ಯಡಿಯೂರಪ್ಪ ಅವರ ರಾಜ್ಯ ಪ್ರವಾಸದ ನಂತರ ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ಧನಂಜಯ್ ಕುಮಾರ್ ತಿಳಿಸಿದ್ದಾರೆ. ಅಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗುವ ಮೂಲಕ ಯಡಿಯೂರಪ್ಪ ಕೈ ಬಲಪಡಿಸುವುದು ತಮ್ಮ ಉದ್ದೇಶ ಎಂದಿದ್ದಾರೆ.
ಬಿಜೆಪಿ ಪಕ್ಷದಲ್ಲಿದ್ದು, ಹಿರಿಯ ನಾಯಕರ ವಿರುದ್ಧ ಟೀಕೆ ಮಾಡಿದ ಕಾರಣಕ್ಕಾಗಿ ಧನಂಜಯ್ ಅವರನ್ನು 2012ರಲ್ಲಿ ಬಿಜೆಪಿಯಿಂದ ಉಚ್ಛಾಟಿಸಲಾಗಿತ್ತು. ಬಳಿಕ ಯಡಿಯೂರಪ್ಪ ಕಟ್ಟಿದ್ದ ಕೆಜೆಪಿ ಪಕ್ಷ ಸೇರಿದ್ದರು.
ಯಡಿಯೂರಪ್ಪ ಮರಳಿ ಬಿಜೆಪಿಗೆ ಸೇರ್ಪಡೆಯಾದರೂ ಧನಂಜಯ್‌ಕುಮಾರ್ ಬಿಜೆಪಿಗೆ ಸೇರ್ಪಡೆಯಾಗಿರಲಿಲ್ಲ. ಆದರೆ ಇದೀಗ ಬಿಎಸ್‌ವೈ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು, ಇವರ ನೇತೃತ್ವದ ಪಕ್ಷಕ್ಕೆ ನನ್ನ ಬೆಂಬಲ ಕೊಡುತ್ತೇನೆ ಎಂದು ಹೇಳುವ ಮೂಲಕ ಪಕ್ಷಕ್ಕೆ ಮರಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.