ರಾಜಕೀಯ

ವಿಜಯ್ ಮಲ್ಯ ಸಂಸದರಾಗಲು ಜೆಡಿಎಸ್ ಕಾರಣವಲ್ಲ: ದೇವೇಗೌಡ

ಸಾಲಬಾಧೆಯಿಂದ ದೇಶ ತೊರೆದಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ಈಗಾಗಲೇ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ವಿಜಯ್ ಮಲ್ಯ ಸಂಸದರಾಗಲು ಜೆಡಿಎಸ್ ಕಾರಣವಲ್ಲ: ದೇವೇಗೌಡ
ಎಚ್.ಡಿ.ದೇವೇಗೌಡ
Published On :
ಬೆಂಗಳೂರು: ಸಾಲಬಾಧೆಯಿಂದ ದೇಶ ತೊರೆದಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ಈಗಾಗಲೇ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಆದರೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ್ದು ಜೆಡಿಎಸ್ ಪಕ್ಷವಲ್ಲ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ವಿಜಯ್ ಮಲ್ಯ ಅವರು ರಾಜ್ಯಸಭೆ ಸದಸ್ಯರಾಗಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು ಎಂಬ ವಾದವನ್ನು ತಳ್ಳಿಹಾಕಿದರು. ವಿಜಯ್ ಮಲ್ಯ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ್ದು ಜೆಡಿಎಸ್ ಅಲ್ಲ.  ಅಂದು ಜೆಡಿಎಸ್ ಪಕ್ಷದಲ್ಲಿ ಕೇವಲ 4 ಶಾಸಕರಷ್ಟೇ ಇದ್ದರು. ಹೀಗಾಗಿ ಮಲ್ಯ ಸಂಸದರಾಗಲು ಜೆಡಿಎಸ್ ಕಾರಣವಲ್ಲ ಎಂದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ  ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.‌ಡಿ. ಕುಮಾರಸ್ವಾಮಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗುತ್ತಿದೆ ಎಂಬುದು ಕೇವಲ ವದಂತಿ, ಅವರು ರಾಜ್ಯಸಭೆಗೆ ಹೋಗುವುದಿಲ್ಲ, ರಾಜ್ಯ ರಾಜಕಾರಣದಲ್ಲೇ ಉಳಿಯುತ್ತಾರೆ ಎಂದರು.
ಕುಮಾರಸ್ವಾಮಿರವರು ರಾಜ್ಯ ರಾಜ್ಯಕಾರಣದಲ್ಲೇ ಉಳಿಯಬೇಕು ಎಂಬುದು ಅವರ ಬೆಂಬಲಿಗರ ಇಚ್ಛೆ. ಹಾಗಾಗಿ ಅವರನ್ನು ರಾಜ್ಯಸಭೆಗೆ ಕಳುಹಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ದೇವೇಗೌಡರು ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.