ರಾಜಕೀಯ

ರಾಜಕೀಯದಿಂದ ನಿವೃತ್ತಿ ಪಡೆಯಲ್ಲ, ನಾನು 24x7 ರಾಜಕಾರಣಿ: ದೇವೇಗೌಡ

ನಾನು ರಾಜಕೀಯದಿಂದ ನಿವೃತ್ತಿ ಪಡೆಯಲ್ಲ ಎಂದಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು...

ರಾಜಕೀಯದಿಂದ ನಿವೃತ್ತಿ ಪಡೆಯಲ್ಲ, ನಾನು 24x7 ರಾಜಕಾರಣಿ: ದೇವೇಗೌಡ
ಎಚ್.ಡಿ.ದೇವೇಗೌಡ
Published On :
ಬೆಂಗಳೂರು: ನಾನು ರಾಜಕೀಯದಿಂದ ನಿವೃತ್ತಿ ಪಡೆಯಲ್ಲ ಎಂದಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ತಾವು 24x7 ರಾಜಕಾರಣಿ ಎಂದು ಬುಧವಾರ ಹೇಳಿದ್ದಾರೆ.
ಇಂದು 84ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಪ್ರಧಾನಿ, ನನಗೆ ದೈವದಲ್ಲಿ ನಂಬಿಕೆ ಇದೆ. ಕಾರ್ಯಕರ್ತರ ಬಲ ಇದೆ. ಹೀಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತೇನೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ದೇವೇಗೌಡ ಅವರು, ಇನ್ಮುಂದೆ ಕಾಲ ಹರಣ ಮಾಡುವುದಿಲ್ಲ. ಪಕ್ಷ ಸಂಘಟಿಸುವತ್ತ ಹೆಚ್ಚಿನ ಗಮನ ಹರಿಸುವುದಾಗಿ ಹೇಳಿದ್ದಾರೆ.
ಇತ್ತೀಚೆಗೆ ಪಕ್ಷದೊಳಗಿನ ಕಿತ್ತಾಟ, ಅಸಮಾಧಾನದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಪಕ್ಷವನ್ನು ಕಟ್ಟಿದ್ದೇನೆ, ಇನ್ನು ಮುಂದೆಯೂ ಪಕ್ಷವನ್ನು ಸಂಘಟಿಸುವುದು ಹೇಗೆಂದು ತಿಳಿದಿದೆ ಎಂದು ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.