ಪ್ರತಿಪಕ್ಷವಾಗಿ ಬಿಜೆಪಿ ವಿಫಲ: ಹೆಚ್.ಡಿ. ದೇವೇಗೌಡ
ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿದ್ದು, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು...

ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿದ್ದು, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಆದರೆ, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದ್ದು, ಮಾಧ್ಯಮಗಳು ಪ್ರತಿಪಕ್ಷ ಪಾತ್ರವನ್ನು ನಿರ್ವಹಿಸುತ್ತಿವೆ. ಈ ಬಗ್ಗೆ ನಾನು ಸರಿಯಾದ ಸಮಯ ಬಂದಾಗ ಮಾತನಾಡುತ್ತೇನೆಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳ ಹೆಸರು ಕುರಿತಂತೆ ಮಾತನಾಡಿರುವ ಅವರು, ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವುದಕ್ಕೂ ಮುನ್ನ ಕುಮಾರಸ್ವಾಮಿ ಈ ಬಗ್ಗೆ ಶಾಸಕರು ಹಾಗೂ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ನಂತರವಷ್ಟೇ ಅಂತಿಮ ಹೆಸರನ್ನು ಸೂಚಿಸಲಾಗುವುದು ಎಂದಿದ್ದಾರೆ. ಇದೇ ವೇಳೆ ಮೋದಿ ಸರ್ಕಾರ 2 ವರ್ಷ ಪೂರ್ಣಗೊಳಿಸಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


