ರಾಜಕೀಯ

ರುದ್ರೇಶ್ ಹತ್ಯೆ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ: ಸಿದ್ದರಾಮಯ್ಯ

ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಕಾರ್ಯಕರ್ತ ರುದ್ರೇಶ್ ಹತ್ಯೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಸಿದ್ದರಾಮಯ್ಯ...

ರುದ್ರೇಶ್ ಹತ್ಯೆ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ: ಸಿದ್ದರಾಮಯ್ಯ
ರುದ್ರೇಶ್-ಸಿದ್ದರಾಮಯ್ಯ
Published On :
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಕಾರ್ಯಕರ್ತ ರುದ್ರೇಶ್ ಹತ್ಯೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. 
ಸಚಿವ ರೋಷನ್ ಬೇಗ್ ಸುಪಾರಿ ಕೊಟ್ಟು ರುದ್ರೇಶ್ ಹತ್ಯೆ ಮಾಡಿಸಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರ ಆರೋಪದ ಹಿನ್ನೆಲೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು ರುದ್ರೇಶ್ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯದಲ್ಲಿ ಸೌಹಾರ್ದತೆ ಮತ್ತು ಸ್ವಾಸ್ಥವನ್ನು ಕದಡುತ್ತಿದೆ. ರೋಷನ್ ಬೇಗ್ ಅವರೇ ರುದ್ರೇಶ್ ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಏನು ಸಾಕ್ಷಿ ಇದೆ. ಇದೆಲ್ಲಾ ಬಿಜೆಪಿ ತನ್ನ ರಾಜಕೀಯ ಅಸ್ವಿಸ್ತಕ್ಕಾಗಿ ಮಾಡುತ್ತಿದೆ ಎಂದರು. 
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು ಇಂತವರ ಕೈಗೆ ಅಧಿಕಾರ ಸಿಕ್ಕರೆ ರಾಜ್ಯದ ಕಥೆ ಮುಗಿದೆಹೋಯಿತು ಎಂದು ಹೇಳಿದ್ದಾರೆ. 
ದಲಿತ ವಿರೋಧಿ ಬಿಜೆಪಿ ಇದೀಗ ಅಂಬೇಡ್ಕರ್ ಅವರ ಹೆಸರನ್ನು ಹೇಳುತ್ತಿದೆ. ಎಸ್ಸಿ, ಎಸ್ಟಿ ಯುವ ಮೋರ್ಚಾ ಸಭೆಗಳನ್ನು ಮಾಡುತ್ತಿದ್ದಾರೆ ಇದೆಲ್ಲಾ ಅಧಿಕಾರ ಚುಕ್ಕಾಣಿ ಹಿಡಿಯಲು ಬಿಜೆಪಿ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.