ರಾಜಕೀಯ

ತನ್ವೀರ್ ಸೇಠ್ ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣ: ಸಿಐಡಿ ಸೈಬರ್ ಹೆಗಲಿಗೆ ತನಿಖೆ ಹೊಣೆ: ಸಿಎಂ

ಸಾರ್ವಜನಿಕ ವೇದಿಕೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿರುವ ಆರೋಪ ಎದುರಿಸುತ್ತಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್‌ ಅವರ ಮೇಲಿರುವ ಆರೋಪದ ...

ತನ್ವೀರ್ ಸೇಠ್ ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣ: ಸಿಐಡಿ ಸೈಬರ್ ಹೆಗಲಿಗೆ ತನಿಖೆ ಹೊಣೆ: ಸಿಎಂ
ಸಿದ್ದರಾಮಯ್ಯ
Published On :

ಬೆಂಗಳೂರು: ಸಾರ್ವಜನಿಕ ವೇದಿಕೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿರುವ ಆರೋಪ ಎದುರಿಸುತ್ತಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್‌ ಅವರ ಮೇಲಿರುವ ಆರೋಪದ ಸತ್ಯಾಸತ್ಯತೆಯನ್ನು ಸಿಐಡಿಯ ಸೈಬರ್ ಸೆಲ್ ಬಯಲಿಗೆಳೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ.

ಮೇಲ್ನೋಟಕ್ಕೆ ತನ್ವೀರ್ ಸೇಠ್ ಯಾವುದೇ ತಪ್ಪು ಮಾಡಿಲ್ಲ ಎಂದು ಕಂಡು ಬರುತ್ತದೆ. ವಾಟ್ಸಾಪ್ ನಲ್ಲಿ ಬಂದಿರುವ ಚಿತ್ರಗಳನ್ನು ವೀಕ್ಷಿಸುತ್ತಿದ್ದರು, ಈ ಬಗ್ಗೆ ಸಿಐಡಿ ತನಿಖೆ ನಡೆಸಿ ವರದಿ ನೀಡುವ ತನಕ ನಾನೇನು ಹೆಚ್ಚಿಗೆ ಹೇಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಟಿಪ್ಪು ಜಯಂತಿ ಸಮಾರಂಭದಲ್ಲಿ ವೇದಿಕೆ ಏರಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಆಶ್ಲೀಲ ಚಿತ್ರಗಳನ್ನು ತಮ್ಮ ಮೊಬೈಲಿನಲ್ಲಿ ವೀಕ್ಷಿಸುತ್ತಿದ್ದಾಗ ಖಾಸಗಿ ಮಾಧ್ಯಮದ ಕಣ್ಣಿಗೆ ಬಿದ್ದಿದ್ದರು.


ಸೇಠ್ ಪ್ರಕರಣದ ಬಗ್ಗೆ ವರದಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಅವರು ಮುಖ್ಯ ಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ನೀಡುವಂತೆ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಇನ್ನು ಬಿಜೆಪಿಯವರು ಏನು ಬಯಸುತ್ತಿದ್ದಾರೆ ಎಂದು ನನಗೆ ಅರ್ಥವಾಗುತ್ತಿಲ್ಲ. ಅವರು ಹೇಳುವುದನ್ನೆಲ್ಲಾ ಕೇಳುವುದಕ್ಕೆ ಆಗುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.