ಪರಿಷತ್ ಸಭಾಪತಿಗೆ ಕಿರಿಕಿರಿ ತಂದ ಪ್ರಿಯಾಂಕ್ ಖರ್ಗೆ ಉತ್ತರ
ಪ್ರಶ್ನೆಯೊಂದಕ್ಕೆ ಬೇಜವಾಬ್ದಾರಿ ಉತ್ತರ ನೀಡಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಗರಂ ಆದ ಘಟನೆ ...

ಬೆಳಗಾವಿ: ಪ್ರಶ್ನೆಯೊಂದಕ್ಕೆ ಬೇಜವಾಬ್ದಾರಿ ಉತ್ತರ ನೀಡಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಗರಂ ಆದ ಘಟನೆ ನಡೆಯಿತು.
ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಸರ್ಕಾರ ಭೂಮಿ ಗುರುತು ಮಾಡಿದೆಯೇ ಎಂದು ಬಿಜೆಪಿಯ ಮಹಾಂತೇಶ ಕವಟಗಿಮಠ ಪ್ರಶ್ನಿಸಿದರು. ಈ ಪ್ರಶ್ನೆಯನ್ನು ಕೈಗಾರಿಕಾ ಇಲಾಖೆಗೆ ವರ್ಗಾಯಿಸಿರುವುದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಖರ್ಗೆ ಉತ್ತರದಿಂದ ಗುಡುಗಿದ ಸಭಾಪತಿ ಶಂಕರಮೂರ್ತಿ ರಾಜ್ಯ ಸರ್ಕಾರದ್ದೇ ಎರಡು ಇಲಾಖೆಗಳಿಗೆ ಬೇರೆ ಬೇರೆ ದೇಶದಲ್ಲಿ ಇರುವಷ್ಟು ಅಂತರವೇ? ಅಧಿಕಾರಿಗಳಿಗೆ ರಾಜ್ಯದ ಬಗ್ಗೆ ಕಾಳಜಿ ಇದೆಯೋ ಇಲ್ಲವೊ ಎಂದು ಗರಂ ಆಗಿ ಪ್ರಶ್ನಿಸಿದರು.
ಐಟಿ ಪಾರ್ಕ್ ನಲ್ಲಿ ಸೌಲಭ್ಯ ಒದಗಿಸುವ ಕಾರ್ಯ ಕೈಗಾರಿಕಾ ಇಲಾಖೆಗೆ ಸೇರಿದ್ದು. ಆದ್ದರಿಂದ ಪ್ರಶ್ನೆಯನ್ನು ಆ ಇಲಾಖೆಗೆ ವರ್ಗಾಯಿಸಲಾಗಿದೆ’ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಐಎಎಸ್ ಅಧಿಕಾರಿಗಳನ್ನು ಸಮರ್ಥಿಸಿಕೊಳ್ಳದಂತೆ ಖರ್ಗೆಗೆ ಸಭಾಪತಿ ಸಲಹೆ ನೀಡಿದರು. ಎರಡು ಇಲಾಖೆಯ ಅಧಿಕಾರಿಗಳು ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


