ಅಧಿವೇಶನದ ಬರ ಚರ್ಚೆಗೆ ಚಕ್ಕರ್: ಮದುವೆ ಸಮಾರಂಭಕ್ಕೆ ಶಾಸಕರ ಹಾಜರ್
ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ಆರಂಭವಾದ ಚಳಿಗಾಲದ ಅಧಿವೇಶನದ ಮೊದಲ ದಿನ ಕೇವಲ ಕೆಲವೇ ಕೆಲವು ಶಾಸಕರು ಮಾತ್ರ ಸದನದಲ್ಲಿ ..

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ಆರಂಭವಾದ ಚಳಿಗಾಲದ ಅಧಿವೇಶನದ ಮೊದಲ ದಿನ ಕೇವಲ ಕೆಲವೇ ಕೆಲವು ಶಾಸಕರು ಮಾತ್ರ ಸದನದಲ್ಲಿ ಹಾಜರಿದ್ದರು.
ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರ ಪರಿಹಾರ ಸಂಬಂಧ ಸದನದಲ್ಲಿ ಚರ್ಚಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಬೆಳಗಾವಿ ಉಸ್ತುವಾರಿ ಸಚಿವ ಹಾಗೂ ಸಣ್ಣ ಕೈಗಾರಿಕಾ ಖಾತೆ ಸಚಿವ ರಮೇಶ್ ಜಾರಕಿ ಹೊಳಿಪುತ್ರನ ಅದ್ಧೂರಿ ವಿವಾಹಕ್ಕೆ ಶಾಸಕರು ಹಾಜರಾಗಿದ್ದರು.
224 ಶಾಸಕರಲ್ಲಿ ಕೇವಲ 182 ಶಾಸಕರು ಮಾತ್ರ ಹಾಜರಿ ಪುಸ್ತಕದಲ್ಲಿ ಸಹಿ ಮಾಡಿದ್ದರು. ಆದರೆ ಕೇವಲ 64 ಶಾಸಕರು ಮಾತ್ರ ಸದನದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಆಡಂಭರದ ವಿವಾಹಗಳಿಗೆ ಹೋಗದಂತೆ ತಮ್ಮ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು ಯಾರು ಅದಕ್ಕೆ ಸೊಪ್ಪು ಹಾಕಲಿಲ್ಲ.
ಪಕ್ಷದ ಗೆರೆ ದಾಟಿ ಸಕ್ಕರೆ ಉದ್ಯಮಿ ರಮೇಶ್ ಜಾರಕಿ ಹೊಳಿ ಪುತ್ರನ ವಿವಾಹಕ್ಕೆ ಹಾಜರಾಗಿದ್ದರು. ಉದ್ಯಮಿಗಳು ಹಾಗೂ ರಾಜಕಾರಣಿಗಳು ಸೇರಿದಂತೆ ಲಕ್ಷಾಂತರ ಮಂದಿಗೆ ರಮೇಶ್ ಜಾರಕಿಹೊಳಿ ಕೆಂಪು ಹಾಸು ಹಾಕಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


