ಬರಪರಿಹಾರ ಕಾರ್ಯಗಳಿಗಾಗಿ ಗ್ರಾಮಗಳಲ್ಲಿ ಕ್ಯಾಂಪ್ ನಡೆಸಲು ಸಚಿವರಿಗೆ ಸಿಎಂ ಸೂಚನೆ
ಬರದಿಂದ ತತ್ತರಿಸಿರುವ ಗ್ರಾಮಗಳಲ್ಲಿ ಬರ ಪರಿಹಾರಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ಹಳ್ಳಿಯಲ್ಲೂ ಕ್ಯಾಂಪ್ ನಡೆಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ...

ಬೆಳಗಾವಿ: ಬರದಿಂದ ತತ್ತರಿಸಿರುವ ಗ್ರಾಮಗಳಲ್ಲಿ ಬರ ಪರಿಹಾರಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ಹಳ್ಳಿಯಲ್ಲೂ ಕ್ಯಾಂಪ್ ನಡೆಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಗ್ರಾಮಗಳಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು ಕೊರತೆ ಸಂಬಂಧ ಮೊದಲೇ ಮಾಹಿತಿ ಸಂಗ್ರಹಿಸಿ ನೀಡಬೇಕು ಎಂದು ಸೂಚಿಸಿದ್ದಾರೆ.
ಸುವರ್ಣ ವಿಕಾಸ ಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಸಿಎಂ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಒದಗಿಸಲು ಅವಶ್ಯವಿರುವ ಎಲ್ಲಾ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ 60 ಲಕ್ಷ ರು ಹಣ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರಿಗಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹಣ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ.
ರೈತರು ಕೋ ಆಪರೇಟಿವ್ ಬ್ಯಾಂಕ್ ಗಳಿಂದ 10 ಸಾವಿರ ಕೋಟಿ, ಹಾಗೂ ವಾಣಿಜ್ಯ ಬ್ಯಾಂಕ್ ಗಳಿಂದ 35.ಸಾವಿರ ಕೋಟಿ ಸಾಲ ಪಡೆದಿದ್ದಾರೆ. ಬರ ಪರಿಹಾರ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರದಿಂದ 4.500 ಕೋಟಿ ಅನುದಾನ ಕೇಳಲಾಗಿದೆ. ಶೀಘ್ರವೇ ಪ್ರಧಾನಿ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ದು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡುವುದಾಗಿ ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


