ಎಸ್ ಸಿ, ಎಸ್ ಟಿ, ಹಿಂದುಳಿದ ವರ್ಗಗಳಿಗೆ ಶೇ.70 ರಷ್ಟು ಮೀಸಲಾತಿಗೆ ಸಿಎಂ ಒಲವು
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದವರಿಗೆ ಜನಸಂಖ್ಯೆ ಆಧರಿಸಿ 70 ಮೀಸಲಾತಿ ಕಲ್ಪಿಸಲು ಚಿಂತನೆ ನಡೆಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ...

ಬೆಳಗಾವಿ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದವರಿಗೆ ಜನಸಂಖ್ಯೆ ಆಧರಿಸಿ 70 ಮೀಸಲಾತಿ ಕಲ್ಪಿಸಲು ಚಿಂತನೆ ನಡೆಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ತಮಿಳುನಾಡು ಮಾದರಿಯಲ್ಲಿ ಶೇ ಮತ್ತು ಜಾತಿ ಗಣತಿ ಕುರಿತ ಕಾಂತರಾಜ ಆಯೋಗದ ವರದಿಯನ್ನು ಬರುವ ಅಧಿವೇಶನದಲ್ಲಿ ಮಂಡಿಸಲು ಚಿಂತನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೀಸಲಾತಿ ಪ್ರಮಾಣ ಹೆಚ್ಚಳ ವಿಷಯವಾಗಿ ಸಂವಿಧಾನ ತಿದ್ದುಪಡಿಗೆ ನಮ್ಮ ಸರಕಾರದ ಕಾಯ್ದೆಯಿಂದಲೇ ಚಾಲನೆ ಸಿಗುವಂತಾಗಲಿ. ಅದೇ ರೀತಿ ಸಂವಿಧಾನ ತಿದ್ದುಪಡಿಗೆ ಕೇಂದ್ರದ ಮನವೊಲಿಸಲು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಾಯಕತ್ವ ವಹಿಸಬೇಕಾಗುತ್ತದೆ ಎಂದರಲ್ಲದೆ, ಜಾತಿ ಗಣತಿ ಕುರಿತು ಕಾಂತರಾಜ್ ಆಯೋಗದ ವರದಿ ಡಿಸೆಂಬರ್ ಇಲ್ಲವೆ ಜನವರಿಯಲ್ಲಿ ಸರಕಾರಕ್ಕೆ ಸಲ್ಲಿಕೆಯಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಮೀಸಲಾತಿ ಪ್ರಮಾಣ ಒಟ್ಟಾರೆ ಶೇ. 50 ಮೀರಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ಇದೆ. ಇನ್ನೊಂದೆಡೆ ತಮಿಳುನಾಡು ಸರಕಾರ ಮೀಸಲು ಪ್ರಮಾಣವನ್ನು ಶೇ. 69ಕ್ಕೆ ಹೆಚ್ಚಿಸಿ ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಮೀಸಲು ಪ್ರಮಾಣವನ್ನು ಶೇ. 70ಕ್ಕೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


