ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಶೀಘ್ರ ಬಿಜೆಪಿ ಸೇರಲಿದ್ದಾರೆ: ಆರ್ ಅಶೋಕ್
ಮಾಜಿ ಸಚಿವ ಹಾಗೂ ನಂಜನಗೂಡು ಕಾಂಗ್ರೆಸ್ ಶಾಸಕ ವಿ.ಶ್ರೀನಿವಾಸ್ ಪ್ರಸಾದ್ ಅವರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ...

Published On :
ಉಡುಪಿ: ಮಾಜಿ ಸಚಿವ ಹಾಗೂ ನಂಜನಗೂಡು ಕಾಂಗ್ರೆಸ್ ಶಾಸಕ ವಿ.ಶ್ರೀನಿವಾಸ್ ಪ್ರಸಾದ್ ಅವರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಗೌರವದಿಂದ ಮನನೊಂದು ಶ್ರೀನಿವಾಸ್ ಪ್ರಸಾದ್ ಪಕ್ಷ ತ್ಯಜಿಸುತ್ತಿದ್ದು, ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದರು.
ಶ್ರೀನಿವಾಸ್ ಪ್ರಸಾದ್ ವಾಜಪೇಯಿ ಸರ್ಕಾರದಲ್ಲಿ ಕೆಲಸ ಮಾಡಿದವರು. ಬಿಎಸ್ ವೈ ಜೊತೆ ಶ್ರೀನಿವಾಸ್ ಪ್ರಸಾದ್ ನಿರಂತರ ಸಂಪರ್ಕದಲ್ಲಿದ್ದು, ಕೆಲವೇ ದಿನದಲ್ಲಿ ಅವರು ಪಕ್ಷ ಸೇರುವ ವಿಶ್ವಾಸವಿದೆ ಎಂದರು. ಅಲ್ಲದೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ಅವರು ಬಿಜೆಪಿ ಸೇರುತ್ತಿದ್ದು, ಮುಂದಿನ ನಾಲೈದು ತಿಂಗಳಿನಲ್ಲಿ ಬಹಳಷ್ಟು ನಾಯಕರು ಬಿಜೆಪಿ ಸೇರಲಿದ್ದಾರೆ ಎಂದರು.
ಇದೇ ವೇಳೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಡಿಸಿಎಂ, ಈ ವಿಚಾರದಲ್ಲಿ ಸದ್ಯಕ್ಕೆ ಗೊಂದಲವಿಲ್ಲ. ರಾಮ್ ಲಾಲ್ ಅವರು ಈಶ್ವರಪ್ಪ ಹಾಗೂ ಯಡಿಯೂರಪ್ಪ ಜೊತೆಯಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಬ್ರಿಗೇಡ್ ಗೊಂದಲ ಸದ್ಯಕ್ಕೆ ಮುಗಿದ ಅಧ್ಯಾಯ. ಎಲ್ಲರೂ ಜೊತೆಯಾಗಿ 2018ರ ಚುನಾವಣೆಗೆ ಕೆಲಸ ಮಾಡುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


