ಕಾಂಗ್ರೆಸ್ ತೊರೆಯುವುದು ಶತಃ ಸಿದ್ಧ: ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ, ಕಾಂಗ್ರೆಸ್ ತೊರೆಯುವುದು ಶತಸಿದ್ಧ ಎಂದು ಮಾಜಿ ಸಚಿವ ಹಾಗೂ ನಂಜನಗೂಡು ಕಾಂಗ್ರೆಸ್...

Published On :
ಮೈಸೂರು: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ, ಕಾಂಗ್ರೆಸ್ ತೊರೆಯುವುದು ಶತಸಿದ್ಧ ಎಂದು ಮಾಜಿ ಸಚಿವ ಹಾಗೂ ನಂಜನಗೂಡು ಕಾಂಗ್ರೆಸ್ ಶಾಸಕ ವಿ.ಶ್ರೀನಿವಾಸ್ ಪ್ರಸಾದ್ ಅವರು ಶುಕ್ರವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ರೆಬಲ್ ಆಗಿರುವ ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿಗದ್ದು, ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಸೋಮವಾರ ಬೆಳಗ್ಗೆ 11ಗಂಟೆಗೆ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್ ಅವರು, ಎಲ್ಲಾ ಮುಗಿದು ಹೋಗಿದೆ. ಕಾಂಗ್ರೆಸ್ ತೊರೆಯುವ ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನವೆಂಬರ್ 1ರಿಂದ ಹೊಸ ರಾಜಕೀಯ ಪರ್ವ ಆರಂಭಿಸುವುದಾಗಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ನೀಡುತ್ತೇನೆ. ಪಕ್ಷದಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು ಮನಸ್ಸಿದೆ ತುಂಬಾ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ನವರು ಪ್ರೀತಿಯಿಂದ ಪಕ್ಷಕ್ಕೆ ಆಹ್ವಾನಿಸುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಬಲಿಷ್ಠ ಪಕ್ಷ ಎಂದಿರುವ ಮಾಜಿ ಸಚಿವನನ್ನು ಸೆಳೆಯಲು ಎರಡೂ ಪಕ್ಷಗಳು ತುದಿಗಾಲಲ್ಲಿ ನಿಂತಿದ್ದು, ಅಂತಿಮವಾಗಿ ಪ್ರಸಾದ್ ತೆನೆ ಹೊರುತ್ತಾರೋ ಅಥವಾ ಕಮಲವನ್ನು ಮುಡಿಗೇರಿಸಿಕೊಳ್ಳುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


