ಶ್ರೀನಿವಾಸ್ ಪ್ರಸಾದ್ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ: ಸಚಿವ ರಾಯರೆಡ್ಡಿ
ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ ಎಂದು ಉನ್ನತ ಶಿಕ್ಷಣ...

Published On :
ಕೊಪ್ಪಳ: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಶನಿವಾರ ಹೇಳಿದ್ದಾರೆ.
ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಯರೆಡ್ಡಿ, ಶ್ರೀನಿವಾಸ್ ಪ್ರಸಾದ್ ಅವರು ಅಧಿಕಾರಕ್ಕಾಗಿ ಪಕ್ಷದ ವಿರುದ್ಧ ಮಾತನಾಡಿದ್ದಾರೆ. ಆದರೆ ಅಧಿಕಾರಕ್ಕಾಗಿ ನಾವೂ ಎಂದೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಸಚಿವ ಸ್ಥಾನಕ್ಕಾಗಿ ನಾವು ಮೂರು ವರ್ಷ ಕಾದಿದ್ದೇವೆ. ಸಚಿವರಾಗಲು ನಮಗೆ ಅರ್ಹತೆ ಇಲ್ಲವೇ ಎಂದು ಪ್ರಶ್ನಿಸಿದರು.
ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ತಪ್ಪಿಲ್ಲ. ಅವರ ರಾಜಿನಾಮೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಾನಿಯಿಲ್ಲ ಎಂದರು.
ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸರಿ ಇಲ್ಲದಿದ್ದರೂ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿತ್ತು. ಮೂರು ವರ್ಷ ಮಂತ್ರಿಯಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಸಿಎಂ ಸಿದ್ದರಾಮಯ್ಯನವರಿಗೆ ಕೃತಜ್ಞರಾಗಿರಬೇಕಿತ್ತು. ಆದರೆ ತಮ್ಮ ಸ್ವಾರ್ಥಕ್ಕಾಗಿ ಪಕ್ಷದ ವಿರುದ್ಧ ಮಾತನಾಡುವುದು ಸರಿಯಲ್ಲ. ಮಂತ್ರಿಯಾಗುವುದು ಜನ್ಮಸಿದ್ಧ ಹಕ್ಕಲ್ಲ ಎಂದು ಸಚಿವ ರಾಯರೆಡ್ಡಿ ಮಾಜಿ ಸಚಿವನಿಗೆ ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕಾಂಗ್ರೆಸ್ResignationರಾಜಿನಾಮೆBasavaraj rayareddyಬಸವರಾಜ ರಾಯರೆಡ್ಡಿShrinivas prasadಶ್ರೀನಿವಾಸ್ ಪ್ರಸಾದ್Cong
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


