ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡಲು ಬನ್ನಿ: ಬಿಎಸ್ ವೈ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಜೆ ಹಾಕಿ ಬಂದು ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಕೆಲಸ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ...

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಜೆ ಹಾಕಿ ಬಂದು ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಕೆಲಸ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಕರೆ ನೀಡಿದ್ದಾರೆ.
ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಇಂದು ಯುರೋಪ್ ಹಾಗೂ ಅಮೆರಿಕ ಅನಿವಾಸಿ ಭಾರತೀಯರ ಜತೆ ವಿಡಿಯೋ ಕಾನ್ಪರೆನ್ಸ್ ಮಾಡಿ ಮಾತನಾಡಿದ ಅವರು, ಈಗಿನಿಂದಲೇ ಹೆಚ್ಚು ಕೆಲಸ ಮಾಡಿ ರಜೆಗಳನ್ನು ಉಳಿಸಿ, ಮುಂದಿನ ವಿಧಾನಸಭಾ ಚುನಾವಣೆಯ ವೇಳೆಗೆ ಇಲ್ಲಿಗೆ ಬಂದು ಬಿಜೆಪಿಯ ಪರವಾಗಿ ಕೆಲಸ ಮಾಡಿ. ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಿ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಉತ್ತಮ ಅವಕಾಶಗಳಿದ್ದರೂ, ಬೆಂಗಳೂರಿನಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾದ ವಾತಾವರಣ ಇಲ್ಲ. ಭೂಮಿ ಲಭ್ಯವಿಲ್ಲ. ಆದರೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಪೂರಕ ವಾತಾವರಣವಿದೆ ಎಂದು ಈ ಸಂದರ್ಭದಲ್ಲಿ ಯಡಿಯೂರಪ್ಪ ಅನಿವಾಸಿ ಭಾರತೀಯರಿಗೆ ಇಲ್ಲಿನ ಪರಿಸ್ಥಿತಿಯ ಕುರಿತು ಸಂದೇಶ ರವಾನಿಸಿದರು.
ಕಾವೇರಿ ಜಲ ವಿವಾದವನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬೇಕು. ಈಗಲೇ ನಮ್ಮ ಕಾವೇರಿ ನದಿ ಪಾತ್ರದಿಂದ ಬಿಡುಗಡೆ ಮಾಡಲು ನೀರಿಲ್ಲ. ಹೀಗಾಗಿ ವಿವಾದವನ್ನು ನ್ಯಾಯಾಲಯದ ಬದಲು ಹೊರಗೆ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವುದು ನಮ್ಮ ಆದ್ಯತೆ ಎಂದು ಅವರು ಅನಿವಾಸಿ ಭಾರತೀಯರಿಗೆ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


