ಕಾಂಗ್ರೆಸ್ ಪಕ್ಷಕ್ಕೆ ನಾಳೆ ಶ್ರೀನಿವಾಸ್ ಪ್ರಸಾದ್ ಗುಡ್ ಬೈ?
ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಹಾಗೂ ನಂಜನಗೂಡು ಕ್ಷೇತ್ರದ ಶಾಸಕ ಶ್ರೀನಿವಾಸ ಪ್ರಸಾದ್ ಅವರು ಸೋಮವಾರ ಕಾಂಗ್ರೆಸ್ ಪಕ್ಷವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮೈಸೂರು: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಹಾಗೂ ನಂಜನಗೂಡು ಕ್ಷೇತ್ರದ ಶಾಸಕ ಶ್ರೀನಿವಾಸ ಪ್ರಸಾದ್ ಅವರು ಸೋಮವಾರ ಕಾಂಗ್ರೆಸ್ ಪಕ್ಷವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮೂಲಗಳ ಪ್ರಕಾರ ನಾಳೆ ಮಧ್ಯಾಹ್ನ ಸ್ಪೀಕರ್ ಕೆಬಿ ಕೋಳಿವಾಡ ಅವರನ್ನು ಭೇಟಿ ಮಾಡಲಿರುವ ಶ್ರೀನಿವಾಸ ಪ್ರಸಾದ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಅವರು ತಮ್ಮ ಬೆಂಬಲಿಗರೊಂದಿಗೆ ಚರ್ಚೆ ನಡೆಸಿ, ನಂತರ ಬಿಜೆಪಿ ಅಥವಾ ಇತರೆ ಪಕ್ಷ ಸೇರುವ ಕುರಿತು ನಿರ್ಧಾರ ಕೈಗೊಳ್ಳಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀನಿವಾಸ್ ಪ್ರಸಾದ್ ಅವರ ಆಪ್ತರ ಪ್ರಕಾರ ಅವರು ಬಿಜೆಪಿ ಪಕ್ಷ ಸೇರುವ ಸಾಧ್ಯತೆ ಇದ್ದು, ಈಗಾಗಲೇ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಇಂದು ಬಿಜೆಪಿ ಮುಖಂಡ ಡಿಎಸ್ ವೀರಯ್ಯ ಮತ್ತು ಅವರ ಸಂಗಡಿಗರು ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಇಂಬು ನೀಡಿದ್ದು, ಮೈಸೂರಿನ ಜಯಲಕ್ಷ್ಮೀ ಪುರಂನಲ್ಲಿರುವ ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಡಿಎಸ್ ವೀರಯ್ಯ ಅವರು ಆಗಮಿಸಿ ಚರ್ಚೆ ನಡೆಸಿದ್ದರು.
ಶ್ರೀನಿವಾಸ್ ಪ್ರಸಾದ್ ಗೆ ಜೆಡಿಎಸ್ ಬೆಂಬಲ
ಮತ್ತೊಂದೆಡೆ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರಿಗೆ ಜೆಡಿಎಸ್ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಪ್ರಸಾದ್ ಅವರು ಯಾವುದೇ ಪಕ್ಷ ಸೇರದೇ ಪಕ್ಷೇತರ ಸ್ಪರ್ಧಿಯಾಗಿ ಸ್ಪರ್ಧಿಸಿದರೆ ಅವರಿಗೆ ಜೆಡಿಎಸ್ ಬೆಂಬಲ ನೀಡಲಿದೆ. ಮುಂಬರವು ಚುನವಾಣೆಯಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಶ್ರೀನಿವಾಸ್ ಪ್ರಸಾದ್ ಅವರನ್ನು ಬೆಂಬಲಿಸುವುದಾಗಿ ಹೇಳಿದೆ.
ಪಕ್ಷೇತರ ಸ್ಪರ್ಧಿಯಾಗಿ ಶ್ರೀನಿವಾಸ್ ಪ್ರಸಾದ್?
ಮತ್ತೊಂದು ಮೂಲಗಳ ಪ್ರಕಾರ ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವ ಶ್ರೀನಿವಾಸ್ ಪ್ರಸಾದ್ ಅವರು ಯಾವುದೇ ಪಕ್ಷ ಸೇರದೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ನಾಳೆ ರಾಜಿನಾಮೆ ಸಲ್ಲಿಸಿ ಬಳಿಕ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


