ರಾಜಕೀಯ

ಸೀಮಿತ ದಾಳಿ ದೊಡ್ಡ ಸಾಧನೆಯಲ್ಲ: ಮಾಜಿ ಪ್ರಧಾನಿ ದೇವೇಗೌಡ

ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ನಡೆಸಿದ ಸೀಮಿತ ದಾಳಿಗೆ...

ಸೀಮಿತ ದಾಳಿ ದೊಡ್ಡ ಸಾಧನೆಯಲ್ಲ: ಮಾಜಿ ಪ್ರಧಾನಿ ದೇವೇಗೌಡ
ಎಚ್.ಡಿ.ದೇವೇಗೌಡ
Published On :
ಚಿಕ್ಕಮಗಳೂರು: ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ನಡೆಸಿದ ಸೀಮಿತ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಅದು ದೊಡ್ಡ ಸಾಧನೆಯಲ್ಲ ಎಂದಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಸೀಮಿತ ದಾಳಿಯ ಕುರಿತ ರಾಜಕೀಯ ಪಕ್ಷಗಳ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ಭಾರತೀಯ ಸೇನೆ ನಡೆಸಿದ ದಾಳಿ ಯುದ್ಧವಲ್ಲ. ಅಲ್ಲದೇ ಸರ್ಜಿಕಲ್ ಸ್ಟ್ರೈಕ್ ಮಹಾತ್ಸಾಧನೆಯಲ್ಲ ಎಂದರು.
ಯುದ್ಧ ಬೇರೆ, ಸೀಮಿತ ದಾಳಿಯೇ ಬೇರೆ. ಹಾಗಾಗಿ ಸೀಮಿತ ದಾಳಿಯ ವಿಷಯದಲ್ಲಿ ರಾಜಕೀಯವಾಗಿ ಲಾಭ ಪಡೆಯುವ ಹುನ್ನಾರ ಬೇಡ. 1965 ಮತ್ತು 1971ರಲ್ಲಿ ಭಾರತ ಪಾಕಿಸ್ತಾನದ ಮೇಲೆ ಯುದ್ಧ ನಡೆಸಿದೆ ಎಂದರು.
ಸೀಮಿತ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಕಿವಿ ಮಾತು ಹೇಳಿದ ದೇವೇಗೌಡರು, ನಮ್ಮ ಯೋಧರು ದೇಶ ರಕ್ಷಣೆಗಾಗಿ ದುಡಿಯುತ್ತಾರೆ. ಹಾಗಾಗಿ ಅವರ ಹೋರಾಟವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.