ರಾಜ್ಯದ ಗುಪ್ತಚರ ಇಲಾಖೆ ಕಾರ್ಯವೈಖರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ
ಮಾಧ್ಯಮಗಳ ವರದಿಯನ್ನಾಧರಿಸಿ ರಾಜ್ಯದ ಗುಪ್ತಚರ ಇಲಾಖೆ ಮಾಹಿತಿ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು ಗುಪ್ತಚರ ಇಲಾಖೆಯ...

Published On :
ಬೆಂಗಳೂರು: ಮಾಧ್ಯಮಗಳ ವರದಿಯನ್ನಾಧರಿಸಿ ರಾಜ್ಯದ ಗುಪ್ತಚರ ಇಲಾಖೆ ಮಾಹಿತಿ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು ಗುಪ್ತಚರ ಇಲಾಖೆಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಷಣದ ವೇಳೆ ಸಿದ್ದರಾಮಯ್ಯ ಅವರು ಗುಪ್ತಚರ ಇಲಾಖೆ ಮಾಧ್ಯಮಗಳ ವರದಿಯನ್ನಾಧರಿಸಿ ಕೆಲಸ ಮಾಡುತ್ತಿದೆ. ಇದು ಹಾಗಾಗಬಾರದು, ಮುಂದೆ ಏನಾಗುತ್ತದೆ ಎನ್ನುವುದನ್ನು ಅವರು ಕಂಡು ಹಿಡಿಯಬೇಕು ಎಂದರು. ಅಲ್ಲದೆ ಗುಪ್ತಚರ ಇಲಾಖೆಯ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಅಗತ್ಯವಿದ್ದು, ನೇಮಕಾತಿಯ ವೇಳೆಯೂ ಸಮರ್ಥರನ್ನೇ ಆಯ್ಕೆ ಮಾಡಬೇಕಿದೆ ಎಂದರು.
ಇನ್ನು ತಮ್ಮ ಭಾಷಣದ ವೇಳೆ ವೇದಿಕೆ ಮೇಲೆ ಉಪಸ್ಥಿತರಿದ್ದ ರಾಜ್ಯಪಾಲ ವಾಜುಬಾಯಿ ವಾಲ ಅವರ ಹೆಸರನ್ನು ಹೇಳಲು ತಡಬಡಾಯಿಸಿದ ಘಟನೆ ನಡೆಯಿತು. ಗೌರವಾನ್ವಿತ... ರೂಡಾವಾಲರೆ ಎಂದು ಭಾಷಣ ಆರಂಭಿಸಿದ ಸಿಎಂ ಕೆಲ ಕಾಲ ಸುಮ್ಮನಿದ್ದು ಇನ್ವಿಟೇಷನ್ ಕೊಡುವಂತೆ ಕೇಳಿದ್ದಾರೆ ಬಳಿಕ ರಾಜ್ಯಪಾಲರೇ ಎಂದು ಭಾಷಣ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


