ರಾಜಕೀಯ

ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕಾರ

ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯನ್ನು ಸ್ಪೀಕರ್ ಕೆ.ಬಿ ಕೋಳಿವಾಡ ಅಂಗೀಕರಿಸಿದ್ದಾರೆ...

ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕಾರ
ವಿ. ಶ್ರೀನಿವಾಸ್ ಪ್ರಸಾದ್
Published On :

ಬೆಂಗಳೂರು: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯನ್ನು ಸ್ಪೀಕರ್ ಕೆ.ಬಿ ಕೋಳಿವಾಡ ಅಂಗೀಕರಿಸಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ್ದರಿಂದ ಸಿಎಂ ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್ ಅಕ್ಟೋಬರ್ 17 ಶಾಸಕ ಸ್ಥಾನಕ್ಕೆ ರಂದು ರಾಜೀನಾಮೆ ಸಲ್ಲಿಸಿದ್ದರು.

ಈ ಸಂಬಂಧ ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಭಾಪತಿ ಕೋಳಿವಾಡ, ಸಂವಿಧಾನ ಅನುಚ್ಛೇದ 190(3) (ಬಿ) ಅಡಿ ರಾಜೀನಾಮೆ ಅಂಗೀಕರಿಸಲಾಗಿದೆ.

ಇಂದು ಮಧ್ಯಾಹ್ನ ಸ್ಪೀಕರ್ ಕಚೇರಿಯಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ಕರೆ ಮಾಡಲಾಗಿತ್ತು. ಈ ವೇಳೆ ರಾಜೀನಾಮೆ ನಿರ್ಧಾರವನ್ನು ಪರಿಶೀಲಿಸುತ್ತೀರಾ ಅಥವಾ ಹಿಂಪಡೆಯುತ್ತೀರಾ ಎಂದು ಕೇಳಲಾಯಿತು, ತಾವು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದೇನೆ,ಅಂಗೀಕರಿಸಬೇಕೆಂದು ಅವರು ತಿಳಿಸಿದರು, ಹೀಗಾಗಿ ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆ ಅಂಗೀಕರಿಸಿದ್ದಾಗಿ ಅವರು ಸ್ಪಷ್ಟ ಪಡಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದ ಶ್ರೀನಿವಾಸ್ ಪ್ರಸಾದ್ ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.