ರಾಜಕೀಯ

'ಸಾರ್ಥಕ ಸಮಾವೇಶ'ದಲ್ಲಿ ಬಿಜೆಪಿ ವಿರುದ್ಧ ಗುಡುಗಿದ 'ಕೈ' ನಾಯಕರು

ರಾಜ್ಯ ಬಿಜೆಪಿ ನಾಯಕರು ನರೇಂದ್ರ ಮೋದಿ ಜಪ ಮಾಡುತ್ತಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ..

'ಸಾರ್ಥಕ ಸಮಾವೇಶ'ದಲ್ಲಿ ಬಿಜೆಪಿ ವಿರುದ್ಧ ಗುಡುಗಿದ 'ಕೈ' ನಾಯಕರು
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರಿಗೆ ಬೆಳ್ಳಿಗದೆ ಮತ್ತು ಬೆಳ್ಳಿ ಕೀರಿಟ ನೀಡಿ ಸಭೆಯಲ್ಲಿ ಸನ್ಮಾನಿಸಲಾ
Published On :

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ನರೇಂದ್ರ ಮೋದಿ ಜಪ ಮಾಡುತ್ತಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ನಗರದ ಅರಮನೆ ಮೈದಾನದಲ್ಲಿ  ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾರ್ಥಕ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಯಡಿಯೂರಪ್ಪ ಅವರು ಅಮಾಯಕರಲ್ಲ. ಕೊಲೆಗಾರ ಖುಲಾಸೆಯಾದರೆ ಕೊಲೆ ನಡೆದಿರುವುದು ಸುಳ್ಳೆ, ಎಂದು ಸಿದ್ದರಾಮಯ್ಯ ಅವರು ಕಿಚಾಯಿಸಿದರು.

ಯಡಿಯೂರಪ್ಪ ಅವರು ಮಾಡಿರುವ ಭ್ರಷ್ಟಾಚಾರವನ್ನು ಜನ ಮರೆಯಲು ಸಾಧ್ಯವಿಲ್ಲ. ಬಿಜೆಪಿಯನ್ನೇ ನಿರ್ನಾಮ ಮಾಡುತ್ತೇನೆ ಎಂದು ಹೊರಟವರು ಅವರು ಎಂದು ಲೇವಡಿ ಮಾಡಿದರು.

ಪರಮೇಶ್ವರ್ ಅವರು ಕೆಪಿಸಿಸಿಯಲ್ಲಿ ದೀರ್ಘಾವಧಿಯಾಗಿ ಕೆಲಸ ಮಾಡಿದ್ದಾರೆ. 2010ರಿಂದ ಅವರು ಅತ್ಯುತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಅವರ ದೀರ್ಘಾವಧಿ ಸೇವೆಯಲ್ಲಿ ಪಕ್ಷ ಉತ್ತಮ ಕೆಲಸ ಮಾಡಿದೆ ಎಂದು ಸಿಎಂ ಹೇಳಿದರು. ಅಲ್ಲದೆ ತಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ ಎಂದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಸಿಎಂ, ರಾಜ್ಯದಲ್ಲಿ ಯಾವುದಾದರೂ ಯೋಜನೆ ಜಾರಿಮಾಡಬೇಕೆಂದು ಅನುದಾನ ಕೇಳಿದರೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಪರ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಯಡಿಯೂರಪ್ಪ ಅವರು " ನ್ಯಾಯಲಯದಲ್ಲಿ ಉತ್ತಮರು ಎಂದು ಮುದ್ರೆ ಹಾಕಿಸಿಕೊಂಡಿರಬಹುದು. ಆದರೆ ಜನತಾ ನ್ಯಾಯಲಯವೊಂದಿದೆ ಅಲ್ಲಿ ಜನ ಅವರಿಗೆ ಪಾಠ ಕಲಿಸುತ್ತಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಅವಕಾಶ ನೀಡುವುದಿಲ್ಲ" ಎಂದರು.

ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಮತನಾಡಿ ಪರಮೇಶ್ವರ್ ಅವರು ಉತ್ತಮ ಆಡಳಿತಗಾರರು. ಅವರ ದಕ್ಷತೆಯನ್ನು ಮೆಚ್ಚಿಯೇ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಅವರ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಅವರ ಸೇವೆ ಅಪಾರ ಎಂದರು.

ಯಾವುದೇ ಕಾರಣಕ್ಕೂ ಪಕ್ಷ ಕಾರ್ಯಕರ್ತರನ್ನು ಮರೆಯಬಾರದು ಕಾರ್ಯಕರ್ತರನ್ನು ಕಡೆಗಣಿಸಿದರೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರಿಗೆ ಬೆಳ್ಳಿಗದೆ ಮತ್ತು ಬೆಳ್ಳಿ ಕೀರಿಟ ನೀಡಿ ಸಭೆಯಲ್ಲಿ ಸನ್ಮಾನಿಸಲಾಯಿತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್, ಲೋಕಸಭೇ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಂಮತ್ರಿ ಧರಂಸಿಂಗ್, ಸಂಸದ ವೀರಪ್ಪ ಮೊಯಿಲಿ ಸೇರಿದಂತೆ ಮತ್ತಿತರರ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.